ನವದೆಹಲಿ: ಮಹಾಮಳೆಗೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಅಗತ್ಯ ನೆರವನ್ನು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
ಮುಖ್ಯಮಂತ್ರಿ ಕುಮಾರ ಸ್ವಾಮಿಯವರಿಗೆ ಫೋನ್ ಕರೆ ಮಾಡಿ ರಾಜ್ಯದ ನೆರೆ ಪರಿಸ್ಥಿತಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, ‘ಕರ್ನಾಟಕ ಸಿಎಂ ಕುಮಾರ ಸ್ವಾಮಿ ಜೊತೆ ನೆರೆ ಪರಿಸ್ಥಿತಿ ಬಗ್ಗೆ ಮಾತನಾಡಿದ್ದೇನೆ, ರಕ್ಷಣಾ ಕಾರ್ಯಾಚರಣೆ ಮತ್ತು ಪರಿಹಾರ ಪೂರೈಕೆಗೆ ಬೇಕಾದ ಎಲ್ಲಾ ನೆರವನ್ನು ನೀಡುತ್ತೇವೆ. ನೆರೆ ಸಂತ್ರಸ್ಥರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ನೆರೆಯಿಂದಾಗಿ ಕೊಡಗು ಜಿಲ್ಲೆ ತತ್ತರಿಸಿ ಹೋಗಿದ್ದು, ಸಾವಿರಾರು ಜನರು ಮನೆ ಮಠ ಕಳೆದುಕೊಂಡು ನಿರ್ಗತಿಕರಾಗಿದ್ದಾರೆ. ಇದುವರೆಗೆ ಅಲ್ಲಿ 8 ಮಂದಿ ಸಾವಿಗೀಡಾಗಿದ್ದಾರೆ.
Spoke to Karnataka CM Shri @hd_kumaraswamy Ji regarding the flood situation in parts of the state. Extended all possible support in the rescue and relief operations. I pray for the safety and well-being of those in the flood affected areas. @CMofKarnataka
— Narendra Modi (@narendramodi) August 19, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.