ಜಕಾರ್ತ: ಭಾರತೀಯ ಶೂಟರ್ಗಳು 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಿಂಚುತ್ತಿದ್ದಾರೆ. ಇಂದಿನ ಪಂದ್ಯದಲ್ಲಿ 16 ವರ್ಷದ ಸೌರಭ್ ಚೌಧರಿ ಭಾರತಕ್ಕೆ 3ನೇ ಬಂಗಾರವನ್ನು ತಂದಿತ್ತಿದ್ದಾರೆ. ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ಈಗಾಗಲೇ ದೇಶಕ್ಕೆ ಬಂಗಾರ ತಂದಿತ್ತಿದ್ದಾರೆ.
ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್ನಲ್ಲಿ ಸೌರಭ್ ಅವರು ಜಪಾನಿನ ಆಟಗಾರ ಟೊಮೊಯುಕಿ ಮತ್ಸುದ ಅವರನ್ನು ಮಣಿಸಿ ಬಂಗಾರದ ಪದಕಕ್ಕೆ ಕೊರಳೊಡ್ಡಿದರು.
ಸೌರಭ್ ಅವರು 240.7 ಪಾಯಿಂಟ್ಗಳನ್ನು ಗಳಿಸಿದರೆ, ಟೊಮೊಯುಕಿ ಅವರು 239.7 ಪಾಯಿಂಟ್ನ್ನು ಗಳಿಸಿದ್ದಾರೆ.
ಸೌರಭ್ ಮಾತ್ರವಲ್ಲದೇ, ಇಂದಿನ ಪಂದ್ಯದಲ್ಲಿ ಅಭಿಷೇಕ್ ವರ್ಮಾ ಅವರು ಪುರುಷರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಜಯಿಸಿದ್ದಾರೆ.
ಭಾರತದ ಪದಕಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 3 ಬಂಗಾರ, 2 ಬೆಳ್ಳಿ ಮತ್ತು 3 ಕಂಚಿನ ಪದಕಗಳಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.