ನವದೆಹಲಿ: ಕೋಚಿಂಗ್ ಕ್ಲಾಸ್ಗಳ ಮೇಲೆ ವಿದ್ಯಾರ್ಥಿಗಳ ಅವಲಂಬನೆಯನ್ನು ಕಡಿಮೆ ಮಾಡುವ ಸಲುವಾಗಿ ’ಸ್ವಯಂ’ ಪೋರ್ಟಲ್ನಲ್ಲಿ IIT-PAL ಉಪನ್ಯಾಸಗಳು ಲಭ್ಯವಾಗುವಂತೆ ಮಾಡಲಾಗಿದೆ.
’ಭೌತಶಾಸ್ತ್ರ, ರಸಾಯಣ ಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಿತ ಶಾಸ್ತ್ರಕ್ಕೆ ಸಂಬಂಧಿಸಿದ ಸುಮಾರು 600 ಉಪನ್ಯಾಸಗಳು IIT-PALನಲ್ಲಿದೆ. ಇದು ಸಂವಾದ ವೇದಿಕೆಯಂತೆ ಕಾರ್ಯನಿರ್ವಹಣೆ ಮಾಡಲಿದ್ದು, ವಿದ್ಯಾರ್ಥಿಗಳ ಕೋಚಿಂಗ್ ಕ್ಲಾಸ್ ಅವಲಂಬನೆಯನ್ನು ಕಡಿಮೆ ಮಾಡಲಿದೆ’ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ತಿಳಿಸಿದ್ದಾರೆ.
ಐಐಟಿ ತನ್ನ ಪ್ರದೇಶದಲ್ಲಿನ ಕನಿಷ್ಠ 5 ಎಂಜಿನಿಯರಿಂಗ್ ಕಾಲೇಜುಗಳಿಗೆ ಮೆಂಟರ್ ಆಗಿ ಕಾರ್ಯನಿರ್ವಹಿಸಬೇಕು, ಇದರಿಂದ ಆ ಕಾಲೇಜುಗಳ ಗುಣಮಟ್ಟ ವೃದ್ಧಿಯಾಗಲಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.