ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ದೇಶದ ಮುಸ್ಲಿಂ ಬಾಂಧವರಿಗೆ ಈದ್ ಉಲ್ ಅಧಾ ಹಬ್ಬದ ಶುಭಾಶಯವನ್ನು ಕೋರಿದ್ದಾರೆ.
‘ದೇಶ ಮತ್ತು ವಿದೇಶದಲ್ಲಿ ನೆಲೆಸಿರುವ ಮುಸ್ಲಿಂ ಸಹೋದರ, ಸಹೋದರಿಯರಿಗೆ ಈದ್ ಉಲ್ ಝುಹ ಹಬ್ಬದ ಶುಭಾಶಯಗಳು, ತ್ಯಾಗದ ಪವಿತ್ರ ಪ್ರೇರಣೆಯನ್ನು ಆಚರಿಸುತ್ತೇವೆ. ನಮ್ಮ ಸಮಾಜದಲ್ಲಿ ಒಟ್ಟಾಗಿ ಏಕತೆ ಮತ್ತು ಬ್ರಾತೃತ್ವಕ್ಕಾಗಿ ಶ್ರಮಿಸೋಣ’ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೂ, ‘ಎಲ್ಲರಿಗೂ ಈದ್ ಉಲ್ ಝುಹ ಹಬ್ಬದ ಶುಭಕಾಮನೆಗಳು, ಈ ಹಬ್ಬ ಸಹಾನುಭೂತಿ ಮತ್ತು ಸೌಹಾರ್ದತೆಯ ಭಾವವನ್ನು ಇನ್ನಷ್ಟು ಗಾಢಗೊಳಿಸಲಿ’ ಎಂದಿದ್ದಾರೆ.
ತ್ಯಾಗದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ವಿಶ್ವದಾದ್ಯಂತದ ಮುಸ್ಲಿಂ ಬಾಂಧವರು ಆಚರಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.