ಫೋರ್ಬ್ಸ್ ತನ್ನ 2018ರ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಆಟಗಾರ್ತಿಯರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಇದರಲ್ಲಿ ಭಾರತದ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ಫೋರ್ಬ್ಸ್ನ ಟಾಪ್ 10 ಪಟ್ಟಿಯಲ್ಲಿ 7ನೇ ಸ್ಥಾನವನ್ನು ಪಡೆದಿದ್ದಾರೆ ಹಾಗೂ ಈ ಮೂಲಕ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಏಕೈಕ ಭಾರತೀಯರಾಗಿದ್ದಾರೆ.
2016ರ ರಿಯೊ ಓಲಂಪಿಕ್ಸ್ನಲ್ಲಿ ಪಿ.ವಿ ಸಿಂಧು ತನ್ನ ಐತಿಹಾಸಿಕ ಪದಕವನ್ನು ಗೆದ್ದುಕೊಂಡಿದ್ದರು. ಒಟ್ಟು 500,000 ಡಾಲರ್ ಬಹುಮಾನದ ಮೊತ್ತ ಹಾಗೂ ಹಲವು ಕಂಪನಿಗಳ ಜೊತೆ ಒಪ್ಪಂದದಲ್ಲಿ 8 ಮಿಲಿಯನ್ ಡಾಲರ್ ಗಳಿಸುವ ಮೂಲಕ ಫೋರ್ಬ್ಸ್ನ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಕ್ರೀಡಾಪಟುಗಳ ಟಾಪ್ 10 ಪಟ್ಟಿಯಲ್ಲಿ 7ನೇ ಸ್ಥಾನವನ್ನು ಪಡೆದಿದ್ದಾರೆ.
ಫೋರ್ಬ್ಸ್ ತನ್ನ ಪ್ರಕಟಣೆಯಲ್ಲಿ, ‘ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು 2016ರ ಓಲಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟುವಾಗಿ ಹೊರಮ್ಮಿದ್ದರು. ಬ್ರಿಡ್ಜ್ಸ್ಟೋನ್, ಗಟೋರೆಡ್, ನೋಕಿಯಾ, ಪ್ಯಾನಸಾನಿಕ್ ಹಾಗೂ ಇನ್ನೂ ಹಲವು ಪ್ರಸಿದ್ಧ ಕಂಪನಿಗಳೊಂದಿಗೆ ಸಹಿ ಹಾಕಿರುವ ಸ್ಟಾರ್ ಆಟಗಾರ್ತಿ ಇವರಾಗಿದ್ದಾರೆ’ ಎಂದು ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.