ನವದೆಹಲಿ: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಗಗನಯಾತ್ರಿಕರ ತರಬೇತಿ ಕೇಂದ್ರವನ್ನು ಆರಂಭಿಸಲು ಇಸ್ರೋ ನಿರ್ಧರಿಸಿದೆ. ಸುಮಾರು 40ರಿಂದ 45 ಎಕರೆ ಪ್ರದೇಶದಲ್ಲಿ ಇದು ಸ್ಥಾಪನೆಗೊಳ್ಳುವ ನಿರೀಕ್ಷೆ ಇದೆ.
ಮೊನ್ನೆ ಸ್ವಾತಂತ್ರ್ಯೋತ್ಸವದ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಮಾನವ ಸಹಿತ ಬಾಹ್ಯಾಕಾಶ ಯೋಜನೆಯನ್ನು ಘೋಷಣೆ ಮಾಡಿದ್ದರು. ಈ ನಿಟ್ಟಿನಲ್ಲಿ ಇಸ್ರೋ ಕಾರ್ಯೋನ್ಮುಖಗೊಂಡಿದೆ.
ಆದರೆ ಈ ತರಬೇತಿ ಕೇಂದ್ರಕ್ಕೆ 2022ರ ಗಗನಯಾನ ಯೋಜನೆಯ ಗಗನಯಾತ್ರಿಕರಿಗೆ ತರಬೇತಿಯನ್ನು ನೀಡಲು ಸಾಧ್ಯವಾಗುವುದಿಲ್ಲ ಎಂದು ಇಸ್ರೋ ಮುಖ್ಯಸ್ಥ ಕೆ.ಸಿವನ್ ಸ್ಪಷ್ಟಪಡಿಸಿದ್ದಾರೆ.
2022ರ ಯೋಜನೆಯ ಗಗನಯಾತ್ರಿಕರು ರಷ್ಯಾ ಅಥವಾ ಅಮೆರಿಕಾದಲ್ಲಿ ತರಬೇತಿ ಪಡೆಯುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.