ನವದೆಹಲಿ: ದೇಶದ ಶಾಲೆಗಳಲ್ಲಿ ಇರುವ ಪರಿಣಿತ ಮಾನಸಿಕ ಕೌನ್ಸೆಲರ್ಗಳ ಕೊರತೆಯನ್ನು ಹೋಗಲಾಡಿಸುವ ಸಲುವಾಗಿ ಶಾಲಾ ಶಿಕ್ಷಕರುಗಳಿಗೆಯೇ ವಿದ್ಯಾರ್ಥಿಗಳಲ್ಲಿ ಇರಬಹುದಾಂತಹ ಒತ್ತಡ, ಖಿನ್ನತೆಗಳನ್ನು ಗುರುತಿಸುವ ತರಬೇತಿಯನ್ನು ನೀಡಲು ಕೇಂದ್ರ ಆರೋಗ್ಯ ಸಚಿವಾಲಯ ನಿರ್ಧರಿಸಿದೆ.
ದೇಶದ 10 ಲಕ್ಷಕ್ಕೂ ಅಧಿಕ ಶಿಕ್ಷಕರಿಗೆ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳ ಖಿನ್ನತೆ, ಒತ್ತಡ, ದೌರ್ಜನ್ಯ, ಪೀಡಣೆ ಇತ್ಯಾದಿಗಳ ಗುರುತಿಸಿ ಸೂಕ್ತ ಪರಿಹಾರ ನೀಡುವ ಬಗ್ಗೆ ಇವರು ತರಬೇತಿಯನ್ನು ಪಡೆದುಕೊಳ್ಳಲಿದ್ದಾರೆ.
ಸರ್ಕಾರಿ ಶಾಲೆ ಮತ್ತು ಅನುದಾನಿತ ಶಾಲೆಗಳ ತಲಾ ಇಬ್ಬರು ಶಿಕ್ಷಕರುಗಳು ಈ ತರಬೇತಿಯನ್ನು ಪಡೆದುಕೊಳ್ಳಲಿದ್ದಾರೆ. ವಾರದಲ್ಲಿ ಒಂದು ದಿನ ಇವರಿಗೆ ತರಬೇತಿ ಕಾರ್ಯ ಜರುಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.