ಜಕಾರ್ತ: ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ಕ್ರೀಡಾಕೂಡ ಆ.25ರ ಶನಿವಾರ 7ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೆ 27 ಪದಕಗಳನ್ನು ಗೆದ್ದಿರುವ ಭಾರತ ಪದಕ ಪಟ್ಟಿಯಲ್ಲಿ 9ನೇ ಸ್ಥಾನವನ್ನು ಪಡೆದುಕೊಂಡಿದೆ.
ಏಳನೇ ದಿನವಾದ ಇಂದು ಸ್ಕ್ವಾಶ್ ಆಟಗಾರ್ತಿ ದೀಪಿಕಾ ಪಲ್ಲಕಲ್ ಅವರು ಕಂಚಿನ ಪದಕವನ್ನು ಪಡೆದುಕೊಂಡಿದ್ದಾರೆ.
ಇದುವರೆಗೆ ಭಾರತ 6 ಬಂಗಾರ, 5 ಬೆಳ್ಳಿ, 16 ಕಂಚಿನ ಪದಕಗಳನ್ನು ತನ್ನದಾಗಿಸಿಕೊಂಡಿದೆ.
ಶುಕ್ರವಾರ ರೋಹನ್ ಬೋಪಣ್ಣ ಮತ್ತು ದಿವಿಜ್ ಶರಣ್ ಅವರ ಜೋಡಿ ಟೆನ್ನಿಸ್ ಪುರುಷರ ಡಬಲ್ಸ್ನಲ್ಲಿ ಬಂಗಾರ ಗೆದ್ದಿದೆ ಮತ್ತು ಪುರುಷರ ಸ್ಕ್ವಾಡ್ರಪಲ್ ಸ್ಕಲ್ಸ್ನಲ್ಲಿ ಮತ್ತೊಂದು ಬಂಗಾರ ಪ್ರಾಪ್ತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.