ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ನಕ್ಸಲರಿಗೆ ನೆರವು ನೀಡುತ್ತಿದ್ದ ಆರೋಪದ ಮೇರೆಗೆ ತೆಲುಗಿನ ಖ್ಯಾತ ಲೇಖಕ ವರವರ ರಾವ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ
ಹೈದಾರಾಬಾದ್ನಲ್ಲಿನ ಅವರ ನಿವಾಸದ ಮೇಲೆ ಇಂದು ದಾಳಿ ನಡೆಸಿದ ಪೊಲೀಸರು, ಕೆಲವು ಸಮಯದವರೆಗೆ ಅವರನ್ನು ವಿಚಾರಣೆಗೊಳಪಡಿಸಿ ಬಳಿಕ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಬಗ್ಗೆ ರೋನಾ ಜಾಕೋಬ್ ವಿಲ್ಸನ್ ಎಂಬುವವರ ಮನೆಯಲ್ಲಿ ಹಲವಾರು ಕಾಗದಗಳು ಲಭ್ಯವಾಗಿದ್ದವು, ಇವುಗಳಲ್ಲಿ ವರವರ ರಾವ್ ಸೇರಿದಂತೆ ಹಲವಾರು ಮಂದಿಯು ಹೆಸರು ಇತ್ತು ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.