ಮಂಗಳೂರು : ಮಂಗಳೂರಿನ ಗಂಜಿಮಠ ಕೈಗಾರಿಕಾ ವಲಯದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪ್ಲಾಸ್ಟಿಕ್ ಪಾರ್ಕ್ ಕುರಿತು ಇಂದು ಬೆಂಗಳೂರಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ದರ್ಪಣ್ ಜೈನ್, IAS ಇವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣದ ಬಗ್ಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಚರ್ಚಿಸಲಾಯಿತು. ಒಂದು ತಿಂಗಳೊಳಗಾಗಿ ಪ್ರಸ್ತಾವನೆ ಸಲ್ಲಿಸಲು ನಿರ್ಣಯಿಸಲಾಯಿತು.
ಕೇಂದ್ರ ಸರಕಾರ ಅನುಷ್ಠಾನಗೊಳಿಸಲಿರುವ ಯೋಜನೆ ಇದಾಗಿದ್ದು, 1000 ಕೋಟಿ ರೂ ವ್ಯವಹಾರ ನಡೆಯಲಿದೆ. ಪ್ಲಾಸ್ಟಿಕ್ ಪಾರ್ಕ್ ಯೋಜನೆಯಿಂದಾಗಿ 1000 ಜನರಿಗೆ ಉದ್ಯೋಗ ಲಭಿಸಲಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಕೈಗಾರಿಕೆಗಳು ಬರುವಂತೆ ಬಾಡಿ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸುವಂತೆ ಆಯುಕ್ತರನ್ನು ಸಂಸದರು ಪ್ರತ್ಯೇಕವಾಗಿ ಕೋರಿದರು.
ಈ ಉನ್ನತ ಮಟ್ಟದ ಸಭೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ಎಂ.ಆರ್.ಪಿ.ಎಲ್ ಆಡಳಿತ ನಿರ್ದೇಶಕರಾದ ವೆಂಕಟೇಶ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟೀ ನಿರ್ದೇಶಕರಾದ ಗೋಕುಲ್ ದಾಸ್ ನಾಯಕ್ ಹಾಗೂ ಇತರ ಉನ್ನತ ಅಧಿಕಾರಿಗಳು ಹಾಜರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.