ನವದೆಹಲಿ: ಕಳೆದ ನಾಲ್ಕು ವರ್ಷಗಳ ಆಡಳಿತದಲ್ಲಿ ಎನ್ಡಿಎ ಸರ್ಕಾರ 5 ಕೋಟಿ ಜನರನ್ನು ಬಡತನದಿಂದ ಹೊರತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತಮ್ಮ ಲೋಕಸಭಾ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿ ಪದಾಧಿಕಾರಿಗಳನ್ನು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಭಿವೃದ್ಧಿಯ ಪಥದಿಂದ ಹೊರಗುಳಿದಿರುವ ಜನರನ್ನು ಮುಖ್ಯವಾಹಿನಿಗೆ ಕರೆತರುವ ಕಾರ್ಯವನ್ನು ಸರ್ಕಾರ ನಿರಂತರವಾಗಿ ಮಾಡುತ್ತಿದೆ ಎಂದರು.
ವಾರಣಾಸಿಯ ಪ್ರತಿಯೊಬ್ಬರು ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಚಳುವಳಿಯ ಭಾಗಿದಾರರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
2019ರ ಜನವರಿಯಲ್ಲಿ ವಾರಣಾಸಿಯಲ್ಲಿ ಜರುಗುತ್ತಿರುವ ‘ಪ್ರವಾಸಿ ಭಾರತೀಯ ದಿವಸ್’ನ ಸಿದ್ಧತಾ ಕ್ರಮಗಳ ಬಗ್ಗೆ ವಿವರಿಸಿದ ಅವರು, ಈ ನಗರದ ಜನರು ಕಾರ್ಯಕ್ರಮವನ್ನು ಯಶಸ್ವಿಗೊಳಿಸುತ್ತಾರೆ ಎಂಬ ನಂಬಿಕೆ ಇದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.