ನವದೆಹಲಿ: ಕೇಂದ್ರ ಸರ್ಕಾರದ ಅತ್ಯಂತ ಮಹತ್ವಪೂರ್ಣ ಯೋಜನೆಯಾದ ‘ಆಯುಷ್ಮಾನ್ ಭಾರತ’ದ ಲೋಗೋ ಅನಾವರಣಗೊಂಡಿದೆ. ಮೂಲಗಳ ಪ್ರಕಾರ ಯೋಜನೆಗೆ ಸೆ.25ರಂದು ಜನಸಂಘ ಮುಖಂಡ ಪಂಡಿತ್ ದೀನ್ ದಯಾಳ್ ಉಪಧ್ಯಾಯ ಅವರ ಜನ್ಮದಿನದಂದು ಚಾಲನೆ ಸಿಗಲಿದೆ.
ಸೆ.25ರಂದು ಈ ಮಹತ್ವದ ಯೋಜನೆಯನ್ನು ಲೋಕಾರ್ಪಣೆಗೊಳಿಸುವ ನಿಟ್ಟಿನಲ್ಲಿ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಹೇಳಿದ್ದಾರೆ.
ಈ ಯೋಜನೆಯಡಿ ದೇಶದ ಸುಮಾರು 10 ಕೋಟಿ ಬಡ ಕುಟುಂಬಗಳಿಗೆ ವಾರ್ಷಿಕ ರೂ.5 ಲಕ್ಷದ ಆರೋಗ್ಯ ವಿಮೆ ಸಿಗಲಿದೆ.
ಈ ಯೋಜನೆಯ ವೆಬ್ಸೈಟ್ ಮತ್ತು ಅಪ್ಲಿಕೇಶನ್ ಸೆ.15ರಂದು ಅನಾವರಣಗೊಳ್ಳುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.