ನವದೆಹಲಿ: ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಹೋರಾಟಗಾರರನ್ನು ಬಂಧಿಸಿದ್ದನ್ನು ಪ್ರಶ್ನಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ.
ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯನ್ನು ರಾಜಕೀಯದಿಂದ ದೂರವಿಡುವಂತೆ ರಾಹುಲ್ ಅವರಿಗೆ ರಿಜಿಜು ಸಲಹೆ ನೀಡಿದ್ದಾರೆ.
ಟ್ವಿಟ್ ಮಾಡಿರುವ ಅವರು, ‘ನಕ್ಸಲರು ದೇಶದ ಆಂತರಿಕ ಭದ್ರತೆಗೆ ನಂ1 ಬೆದರಿಕೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಘೋಷಿಸಿದ್ದರು. ಆದರೀಗ ಕಾಂಗ್ರೆಸ್ ಅಧ್ಯಕ್ಷರು ಬಹಿರಂಗವಾಗಿ ನಕ್ಸಲ್ ಬೆಂಬಲಿಗರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ’ ಎಂದಿದ್ದಾರೆ.
ಐವರು ನಕ್ಸಲ್ ಒಲವುಳ್ಳ ಹೋರಾಟಗಾರರನ್ನು ಬಂಧನಕ್ಕೊಳಪಡಿಸಿದ್ದಕ್ಕೆ ರಾಹುಲ್ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.