ನವದೆಹಲಿ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸತ್ಯ ಸುದ್ದಿಗಳಿಗಿಂತ ಹೆಚ್ಚಾಗಿ ಸುಳ್ಳು ಸುದ್ದಿಗಳೇ ಹರಿದಾಡುತ್ತಿವೆ. ಇದರಿಂದಾಗಿ ಜನರಿಗೆ ಸತ್ಯ ಯಾವುದು ಮತ್ತು ಸುಳ್ಳು ಯಾವುದು ಎಂಬುದನ್ನು ಅರ್ಥಮಾಡಿಕೊಳ್ಳುವುದೇ ಕಷ್ಟವಾಗುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಈ ಆವಾಂತರಗಳನ್ನು ಅರ್ಥ ಮಾಡಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರು, ತಮ್ಮ ಪಕ್ಷದ ಕಾರ್ಯಕರ್ತರಿಗೆ ಫೇಕ್ ನ್ಯೂಸ್ಗಳ ಬಗ್ಗೆ ಎಚ್ಚರವಹಿಸುವಂತೆ ಕಿವಿಮಾತು ಹೇಳಿದ್ದಾರೆ.
ವೀಡಿಯೋ ಕಾನ್ಫರೆನ್ಸ್ ಮೂಲಕ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿರುವ ಅವರು, ಜನರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಸಲುವಾಗಿ ಸಾಮಾಜಿಕ ಜಾಲತಾಣಗಳನ್ನು ಸಕ್ರಿಯವಾಗಿ ಬಳಸಿ ಎಂದಿದ್ದಾರೆ. ಅಲ್ಲದೇ ಕಣ್ಮುಚ್ಚಿ ಯಾವ ವಿಷಯಗಳನ್ನು ಫಾರ್ವರ್ಡ್ ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.
ಫೇಕ್ ಸುದ್ದಿಗಳು ಜನರ, ಸಮಾಜದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬ ಅರಿವೇ ಇಲ್ಲದ ಜನರು ಸುಳ್ಳು ಸುದ್ದಿಗಳನ್ನು ಹರಡುತ್ತಾರೆ. ಈ ಬಗ್ಗೆ ಎಚ್ಚರಿಕೆವಹಿಸುವುದು ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.