ಬೆಂಗಳೂರು : ರಾಜ್ಯದ ಸಾಮಾಜಿಕವಾಗಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ನೆರವಾಗುವ ರಾಷ್ಟ್ರೋತ್ಥಾನ ಪರಿಷತ್ನ ಯೋಜನೆಯಾದ ’ತಪಸ್’(ಹುಡುಗರಿಗೆ) ಹಾಗೂ ’ಸಾಧನಾ’ (ಹುಡುಗಿಯರಿಗೆ) ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಅರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದ ಕುಟುಂಬದ ಪ್ರತಿಭಾವಂತ ಮಕ್ಕಳಿಗೆ ಪಿಯುಸಿ ಶಿಕ್ಷಣದ ಜೊತೆಗೆ ಉನ್ನತ ಶಿಕ್ಷಣಕ್ಕೆ ಅರ್ಹ ತರಬೇತಿ ನೀಡುವ ಸಲುವಾಗಿ ರಾಷ್ಟ್ರೋತ್ಥಾನ ಪರಿಷತ್ ’ತಪಸ್’(ಹುಡುಗರಿಗೆ) ಹಾಗೂ ’ಸಾಧನಾ’ (ಹುಡುಗಿಯರಿಗೆ) ಯೋಜನೆಯನ್ನು ಆರಂಭಿದೆ. ಈ ಯೋಜನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ಸಹಿತ ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತದೆ. ಬಾಲಕರಿಗಾಗಿ ಇರುವ ತಪಸ್ ಯೋಜನೆಯ ಮೂಲಕ ಪಿಯುಸಿ ಹಾಗೂ ಪ್ರತಿಷ್ಠಿತ ಐಐಟಿ-ಜೆಇಇ ಮುಂತಾದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. ಬಾಲಕಿಯರಿಗಾಗಿ ’ಸಾಧನಾ’ ಯೋಜನೆಯ ಮೂಲಕ ಪಿಯುಸಿ ಹಾಗೂ NEET, CET, KVPY ಮುಂತಾದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ.
ಪ್ರಸ್ತುತ 10 ನೇ ತರಗತಿ ಓದುತ್ತಿರುವ ಹಾಗೂ 9ನೇ ತರಗತಿಯಲ್ಲಿ ಶೇ. 80ಕ್ಕಿಂತಲೂ ಅಧಿಕ ಅಂಕಗಳನ್ನು ಪಡೆದ ಆರ್ಥಿಕವಾಗಿ ಹಿಂದುಳಿದ (ಪೋಷಕರ ವಾರ್ಷಿಕ ವರಮಾನ 1,50,000 ಮೀರಿರಬಾರದು) ವಿದ್ಯಾರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದು. ಬಾಲಕರು ತಪಸ್ನ ವೆಬ್ಸೈಟ್ (www.tapasedu.org) ಹಾಗೂ ಬಾಲಕಿಯರು ’ಸಾಧನಾ’ದ ವೆಬ್ಸೈಟ್ (www.rpsaadhana.org)ನಲ್ಲಿ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ಮುಖ್ಯೋಪಾಧ್ಯಾಯರ ಸಹಿಯೊಂದಿಗೆ ಕೆಳಕಂಡ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 10.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಡಿಸೆಂಬರ್ 25 ರಂದು ಆಯಾ ಜಿಲ್ಲೆಗಳ ಜಿಲ್ಲಾಕೇಂದ್ರದಲ್ಲಿ ಅರ್ಹತಾ ಪರೀಕ್ಷೆ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಡಿಸೆಂಬರ್ ಮೊದಲ ವಾರದಲ್ಲಿ ಆಯಾ ವೆಬ್ಸೈಟ್ಗಳಲ್ಲಿ ಪ್ರಕಟಿಸಲಾಗುವುದು. ಅರ್ಹತಾ ಪರೀಕ್ಷೆಗೆ ಅಗತ್ಯ ಮಾದರಿ ಪ್ರಶ್ನೆ ಪತ್ರಿಕೆಗಳು ಆಯಾ ವೆಬ್ಸೈಟ್ಗಳಲ್ಲಿ ಲಭ್ಯವಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಸಂಯೋಜಕರು, ತಪಸ್/ಸಾಧನಾ ಪ್ರಕಲ್ಪ, ರಾಷ್ಟ್ರೋತ್ಥಾನ ಪರಿಷತ್, ’ಕೇಶವಶಿಲ್ಪ’, ಕೆಂಪೇಗೌಡ ನಗರ, ಬೆಂಗಳೂರು – 560019. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ರುಕ್ಮಿಣಿ (ಯೋಜನೆಯ ಸಂಯೋಜಕರು) : 94812 01144
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.