ನವದೆಹಲಿ: ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಕಂಚಿನ ಪದಕವನ್ನು ಗೆದ್ದಿರುವ ಸೀಮಾ ಪೂನಿಯಾ, ತಮಗೆ ದೊರೆತ ಯುಎಸ್ಡಿ 700 ಏಷಿಯಾಡ್ ಪಾಕೆಟ್ ಮನಿ ಮತ್ತು ಹೆಚ್ಚುವರಿ ರೂ.1 ಲಕ್ಷವನ್ನು ಕೇರಳ ನೆರೆ ಸಂತ್ರಸ್ಥರಿಗೆ ನೀಡಲು ನಿರ್ಧರಿಸಿದ್ದಾರೆ.
ಡಿಸ್ಕಸ್ ಥ್ರೋ ವಿಭಾಗದಲ್ಲಿ ಪೂನಿಯಾ ಅವರು ಕಂಚಿನ ಪದಕವನ್ನು ಗೆದ್ದಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಯುಎಸ್ಡಿ 700ಪಾಕೆಟ್ ಮನಿ ರೂಪದಲ್ಲಿ ಸಿಕ್ಕಿದೆ. 2014ರ ಏಷ್ಯನ್ ಗೇಮ್ಸ್ನಲ್ಲಿ ಇವರು ಬಂಗಾರದ ಪದಕವನ್ನು ಜಯಿಸಿದ್ದರು.
ತಾವು ಕೇರಳ ನೆರೆ ಸಂತ್ರಸ್ಥರಿಗೆ ಹಣ ನೀಡಿದ್ದು ಮಾತ್ರವಲ್ಲದೇ, ಇತರ ಕ್ರೀಡಾಳುಗಳು ಕೂಡ ನೆರೆ ಸಂತ್ರಸ್ಥರ ನೆರವಿಗೆ ಧಾವಿಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.