ನವದೆಹಲಿ: ಸ್ವದೇಶ ದರ್ಶನ ಯೋಜನೆಯಡಿ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಕೇರಳದ ಮಲ್ಬಾರ್ ಕ್ರೂಸ್ ಟೂರಿಸಂ ಪ್ರಾಜೆಕ್ಟ್ಗೆ ರೂ 80.37 ಕೋಟಿಯನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಕೇಂದ್ರ ಪ್ರವಾಸೋದ್ಯಮ ಸಚಿವ ಕೆಜೆ ಅಲ್ಫೋನ್ಸ್ ಘೋಷಣೆಯನ್ನು ಮಾಡಿದ್ದು, ರೂ 80.37 ಕೋಟಿ ಬಜೆಟ್ನಲ್ಲಿ 3 ಕ್ರೂಸ್ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದಿದ್ದಾರೆ.
ಕಣ್ಣೂರು ಜಿಲ್ಲೆಯ ವಲಪಟ್ಟಣಂ ಮತ್ತು ಕುಪ್ಪಂ ನದಿಗಳಲ್ಲಿ ನೀರು ಆಧಾರಿತ ಥಿಮ್ಯಾಟಿಕ್ ಕ್ರೂಸ್ ಅನುಭವವನ್ನು ಪ್ರವಾಸಿಗರಿಗೆ ನೀಡುವುದನ್ನು ಗಮನದಲ್ಲಿಟ್ಟುಕೊಂಡು ಪ್ರಾಜೆಕ್ಟ್ನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ.
ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ ಈ ಕ್ರೂಸ್ನ್ನು ಆಪರೇಟ್ ಮಾಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.