ಲಕ್ನೋ: ಕಿಂಡರ್ಗಾರ್ಟನ್ನಿಂದ ಪೋಸ್ಟ್ ಗ್ರ್ಯಾಜುವೇಶನ್ವರೆಗೆ ಉಚಿತ ಶಿಕ್ಷಣವನ್ನು ನೀಡುವ ಮಹತ್ತರವಾದ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ನಿರ್ಧರಿಸಿದ್ದಾರೆ. ಈ ಬಗೆಗಿನ ಘೋಷಣೆ ಶೀಘ್ರದಲ್ಲೇ ಹೊರ ಬೀಳುವ ನಿರೀಕ್ಷೆ ಇದೆ.
ಈ ಬಗ್ಗೆ ಮಾಹಿತಿ ನೀಡಿರುವ ಯುಪಿ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ, ‘ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಕೆಲವು ನಗರಗಳಲ್ಲಿ ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣ ನೀಡುವ ಯೋಜನೆ ಜಾರಿಗೊಳ್ಳಲಿದೆ’ ಎಂದಿದ್ದಾರೆ.
ಹಿಂದಿನಿಂದಲೂ ಶಿಕ್ಷಣವನ್ನು ಉಚಿತಗೊಳಿಸುವ ಬಗ್ಗೆ ಯೋಗಿ ಪ್ರತಿಪಾದಿಸುತ್ತಾ ಬಂದಿದ್ದಾರೆ. ಇದೀಗ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಮುಂದಿಡಲು ಅವರು ನಿರ್ಧರಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.