ಬೆಂಗಳೂರು : ಮಂಗಳೂರು ಹಾಗೂ ಮೈಸೂರು ವಿವಿಯಲ್ಲಿ ನಡೆದಿರುವ ಭ್ರಷ್ಟಾಚಾರದ ಸೂಕ್ತ ತನಿಖೆಯ ಕುರಿತು ಘನತೆವೆತ್ತ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಯಿತು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನ ರಾಜ್ಯ ನಿಯೋಗ ಇಂದು ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ವಜುಭಾಯಿ ವಾಲಾರವರನ್ನು ಭೇಟಿ ಮಾಡಿ ಮಂಗಳೂರು ವಿವಿಯಲ್ಲಿ ನಡೆದಿದೆ ಎನ್ನಲಾದ ಕೊಟ್ಯಾಂತರ ರೂ.ಗಳ ಅಕ್ರಮದ ಕುರಿತು, ಮೈಸೂರು ವಿವಿಯಲ್ಲಿ ನಡೆದಿರುವ ಅಕ್ರಮ ನೇಮಕಾತಿಯನ್ನು ರದ್ದು ಮಾಡಿ ಕೊಟ್ಯಾಂತರ ರೂ.ಗಳನ್ನು ಲೂಟಿ ಮಾಡಿರುವವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಹಾಗೂ ವಿದ್ಯಾರ್ಥಿಗಳ ಹಣ ದುರ್ಬಳಕೆಯಾಗದಂತೆ ಚರ್ಚೆ ನಡೆಸಲಾಯಿತು.
ABVP ಬೇಡಿಕೆಗಳು
1. ಈ ಮೇಲೆ ಉಲ್ಲೇಖಿಸಿದ ಎಲ್ಲಾ ಹಗರಣಗಳ ಸತ್ಯಾ ಸತ್ಯತೆಯನ್ನು ಪರಿಶೀಲಿಸಲು ನಿಷ್ಪಕ್ಷಪಾತವಾದ, ಉನ್ನತ ಮಟ್ಟದ ಸಮಿತಿಯನ್ನು ತಕ್ಷಣ ರಚಿಸಬೇಕು.
2. ಅದು ಕ್ಲಪ್ತ ಅವದಿಯೊಳಗೆ (ಗರಿಷ್ಟ 3 ತಿಂಗಳು) ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಮಾಡುವುದು.
3. ಸದರಿ ಹಗರಣಗಳಲ್ಲಿ ಭಾಗಿಗಳಾಗಿದ್ದವರು ಅದೆಷ್ಟೇ ಉನ್ನತ ಸ್ತರದ ಅಧಿಕಾರಿಗಳಾಗಿದ್ದರೂ ಅವರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಂಡು ಇನ್ನು ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತಹ ಸಂದೇಶ ರವಾನಿಸಬೇಕು.
ಎಂದು ಬೇಡಿಕೆಗಳ ಮನವಿಯನ್ನು ರಾಜ್ಯಪಾಲರಿಗೆ ನೀಡಲಾಯಿತು.
ರಾಜ್ಯ ಕಾರ್ಯದರ್ಶಿ ಹರ್ಷ ನಾರಾಯಣವರ ನೇತೃತ್ವದಲ್ಲಿ ತೆರಳಿದ ನಿಯೋಗದಲ್ಲಿ ಎಬಿವಿಪಿ ಕಾರ್ಯಕರ್ತರಾದ ಡಾ|| ಶ್ಯಾಮ್ ಭಟ್, ರಕ್ಷಿತ್ ಮತ್ತು ಲತಾ ರವರು ಇದ್ದರು. ನಿಯೋಗಕ್ಕೆ ಸ್ಪಂದಿಸಿದ ರಾಜ್ಯಪಾಲರು ಈ ವಿಷಯದ ಕುರಿತು ಮಾತನಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.