ನವದೆಹಲಿ: ಕಳೆದ ಒಂದು ವಾರದಲ್ಲಿ ದೇಶದ 91 ಪ್ರಮುಖ ಜಲಾಶಯಗಳ ನೀರಿನ ಮಟ್ಟ ಶೇ.4ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ನೀರಾವರಿ ಸಚಿವಾಲಯ ವರದಿಯಲ್ಲಿ ತಿಳಿಸಿದೆ. ಕೇಂದ್ರ ನೀರಾವರಿ ಸಮಿತಿ ಈ ಜಲಾಶಯಗಳನ್ನು ಪರಿವೀಕ್ಷಿಸುತ್ತದೆ.
ಕಳೆದ ವಾರ ಈ ಜಲಾಶಯಗಳಲ್ಲಿ ನೀರಿನ ಮಟ್ಟ ಶೇ.69ರಷ್ಟು ಇತ್ತು, ಈ ವಾರ ಅದು ಶೇ.73ಕ್ಕೆ ಏರಿಕೆಯಾಗಿದೆ. 119.042 ಬಿಸಿಎಂಗೆ ನೀರು ತಲುಪಿದೆ.
ಈ 91 ಜಲಾಶಯಗಳ ನೀರಿನ ಶೇಖರಣಾ ಸಾಮರ್ಥ್ಯ 161.993 ಬಿಸಿಎಂ. ಇವುಗಳ ಪೈಕಿ 37 ಜಲಾಶಯಗಳಲ್ಲಿ ಹೈಡ್ರೋಪವರ್ ಇದ್ದು, 60 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.