ನವದೆಹಲಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪೊಲೀಸ್ ಇಲಾಖೆ ಮಹತ್ತರವಾದ ಪ್ರಗತಿ ಕಾಣುತ್ತಿದೆ. ದೆಹಲಿ ಪೊಲೀಸರ ವಿಶೇಷ ತಂಡ ಶುಕ್ರವಾರ ಇಬ್ಬರು ಉಗ್ರರನ್ನು ಬಂಧನಕ್ಕೊಳಪಡಿಸಿದೆ.
ಬಂಧಿತ ಉಗ್ರರು ಇಸ್ಲಾಮಿಕ್ ಸ್ಟೇಟ್ ಆಫ್ ಜಮ್ಮು ಕಾಶ್ಮೀರ(ಐಎಸ್ಜೆಕೆ)ಗೆ ಸೇರಿದವರು. ಕಣಿವೆ ರಾಜ್ಯದಿಂದಲೇ ಇವರು ತಮ್ಮ ಚಟುವಟಿಕೆಗಳನ್ನು ನಡೆಸುತ್ತಿದ್ದರು ಎನ್ನಲಾಗಿದೆ.
ಈ ಬೆಳವಣಿಗೆಯನ್ನು ಸ್ಪಷ್ಟಪಡಿಸಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಇಬ್ಬರು ಉಗ್ರರೂ ಕಾಶ್ಮೀರದವರೇ ಆಗಿದ್ದು, ಗುರುವಾರ ಮಧ್ಯರಾತ್ರಿ ಬಂಧಿಸಲಾಗಿದೆ ಎಂದಿದ್ದಾರೆ.
ಕೆಂಪುಕೋಟೆ ಪ್ರದೇಶದಿಂದ ಇವರನ್ನು ವಶಕ್ಕೆ ಪಡೆಯಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.