ಮಂಗಳೂರು : ಜಗತ್ತಿಗೆ ಯೋಗವನ್ನು ಪರಿಚಯಿಸಿದ ಭಾರತ ಕಾಲ ಕ್ರಮೇಣ ಯೋಗದ ಮಹತ್ವವನ್ನು ಮರೆತಂತಹ ಸಂದರ್ಭದಲ್ಲಿ ವಿಶ್ವ ಯೋಗ ದಿನದ ಮೂಲಕ ವಿಶ್ವ ಮಾನ್ಯವಾಗುವಂತೆ ಮಾಡಿದ ಕೀರ್ತಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಜಗತ್ತಿನಾದ್ಯಂತ ಯೋಗ ಶಿಕ್ಷಕರಿಗೆ ಬೇಡಿಕೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಯೋಗವು ವ್ರತ ಮಾತ್ರವಲ್ಲ ವೃತ್ತಿಯಾಗಿಯೂ ಅನ್ವಯವಾಗುವಂತ ಯೋಜನೆಯನ್ನು ಕೇಂದ್ರ ಸರಕಾರ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ ಅಡಿಯಲ್ಲಿ ಯೋಗ ಶಿಕ್ಷಕರಿಗೆ ಪ್ರಮಾಣ ಪತ್ರ ನೀಡುವ ಮುಖೇನ ಅವರಿಗೆ ಉದ್ಯೋಗಾವಕಾಶವನ್ನು ಒದಗಿಸುತ್ತದೆ ಎಂದು ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಅವರು ಮಂಗಳೂರಿನ ಕುದ್ರೋಳಿ ಗುಜರಾತಿ ಆಂಗ್ಲ ಮಾಧ್ಯಮ ಶಾಲೆಯ ಸಭಾಂಗಣ ಮಾತೃ ಛಾಯಾದಲ್ಲಿ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ ಅಡಿಯಲ್ಲಿ ಎಂ.ಆರ್.ಪಿ.ಎಲ್. ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು ರಿಕಗ್ನಿಷನ್ ಆಫ್ ಪ್ರೀಯರ್ ಲರ್ನಿಂಗ್ (R P L ) ಎಂಬ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಶಾಸಕರಾದ ಡಾ. ಭರತ್ ಶೆಟ್ಟಿ ವೈ., ಗುಜರಾತಿ ಶಾಲಾ ಅಧ್ಯಕ್ಷರಾದ ಹೀತೇಂದ್ರ ಬಾಯಿ, ಯೋಗ ಶಿಕ್ಷಕರ ಜಿಲ್ಲಾ ಸಂಯೋಜಕರಾದ ಶ್ರೀಮತಿ ಆಶಾ ರವಿ ರವೀಶ್ ಪ್ರಾಂತ ಸಂಚಾಲಕರು ಸಂಘಟನಾ ವಿಭಾಗ SPYSS, ತರಬೇತಿ ಶಿಕ್ಷಕರಾದ ಶಂಕರ್ ಮತ್ತು ಸುನಿಲ್ ಉಪಸ್ಥಿತರಿದ್ದರು.
ತರಬೇತಿ ನಂತರ ಅಭ್ಯರ್ಥಿಗಳನ್ನೂ ಮೌಲ್ಯಮಾಪನ ಮಾಡಿ ಪ್ರಮಾಣ ಪತ್ರ ಕೊಡಲಾಗುವುದು ಈ ತರಬೇತಿಯನ್ನು ಕೇಂದ್ರ ಸರಕಾರದಿಂದ ಮಾನ್ಯತೆ ಪಡೆದ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಆಯೋಜಿಸಿದೆ ಮೂರು ದಿನಗಳವರೆಗೆ ತರಬೇತಿ ಶಿಬಿರ ನಡೆಯಲಿದೆ. ಆರ್ಟ್ ಆಫ್ ಲಿವಿಂಗ್ ಶಿಕ್ಷಕಿ ದೀಪಿಕಾ ಅವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.