ನವದೆಹಲಿ: 2018ರ ಸಾಲಿನ ರಾಷ್ಟ್ರೀಯ ಮಕ್ಕಳ ಪ್ರಶಸ್ತಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ.
ಶಿಕ್ಷಣ, ಕ್ರೀಡೆ, ಕಲೆ, ಸಂಸ್ಕೃತಿ, ಸಾಮಾಜಿಕ ಸೇವೆ, ಶೌರ್ಯ ಮುಂತಾದ ವಲಯದಲ್ಲಿ ಮಹತ್ತರವಾದ ಸಾಧನೆಯನ್ನು ಮಾಡಿದ ಮಕ್ಕಳು ಈ ಪ್ರಶಸ್ತಿ ಪಡೆಯಲು ಅರ್ಹರಾಗಿದ್ದಾರೆ. ಇಂತಹ ಮಕ್ಕಳ ಹೆಸರನ್ನು ಸೆ.30ರೊಳಗೆ ನಾಮನಿರ್ದೇಶನಗೊಳಿಸಬೇಕಿದೆ.
ಮಕ್ಕಳ ಅನನ್ಯ ಸಾಧನೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ‘ರಾಷ್ಟ್ರೀಯ ಮಕ್ಕಳ ಪ್ರಶಸ್ತಿ’ ಒಂದು ಅತ್ಯುತ್ತಮ ವೇದಿಕೆಯಾಗಿದೆ ಎಂದು ಕೇಂದ್ರ ಸಚಿವೆ ಮೇನಕಾ ಗಾಂಧಿ ಹೇಳಿದ್ದಾರೆ.
ಈ ಪ್ರಶಸ್ತಿ ವಿಜೇತರು ರೂ.1ಲಕ್ಷ ನಗದು ಪುರಸ್ಕಾರ, ರೂ.10 ಸಾವಿರ ಮೊತ್ತದ ಬುಕ್ ವೋಚರ್, ಸರ್ಟಿಫಿಕೇಟ್, ಸ್ಮರಣಿಕೆಯನ್ನು ಪಡೆಯಲಿದ್ದಾರೆ.
ಈ ಪ್ರಶಸ್ತಿಗೆ ಲೋಗೋ ವಿನ್ಯಾಸ ಸ್ಪರ್ಧೆಯನ್ನೂ ಏರ್ಪಡಿಸಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಫೇಸ್ಬುಕ್ ಮತ್ತು ಟ್ವಿಟರ್ನಲ್ಲಿ ಈ ಬಗೆಗಿನ ಮಾಹಿತಿ ಲಭ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.