ಕುಪ್ವಾರ: ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗುಲೂರದಲ್ಲಿನ ಹಂಡ್ವಾರ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಗೆ ಕನಿಷ್ಠ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ. ಈಗಲೂ ಅಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ಭಾನುವಾರ ಭದ್ರತಾ ಪಡೆಗಳು ಕುಪ್ವಾರದ ಕರ್ನಹ ಪ್ರದೇಶದಲ್ಲಿ ಮೂವರು ಉಗ್ರರನ್ನು ವಶಕ್ಕೆ ಪಡೆದುಕೊಂಡ ಬಳಿಕ ಈ ಬೆಳವಣಿಗೆ ನಡೆದಿದೆ. ಗಡಿಯೊಳಗೆ ಅಕ್ರಮವಾಗಿ ಪ್ರವೇಶಿಸಲು ಹವಣಿಸುತ್ತಿದ್ದ ಸಂದರ್ಭ ಮೂವರು ಉಗ್ರರನ್ನು ಬಂಧಿಸಲಾಗಿತ್ತು. ಹೆಚ್ಚಿನ ತನಿಖೆಗಾಗಿ ಇವರನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಶನಿವಾರ ವಿವಿಧ ಭಯೋತ್ಪಾದನಾ ದುಷ್ಕೃತ್ಯಗಳಲ್ಲಿ ಭಾಗಿಯಾಗಿದ್ದ ಲಷ್ಕರ್ ಇ ತೋಯ್ಬಾ ಉಗ್ರನನ್ನು ಅನಂತ್ನಾಗ್ ಜಿಲ್ಲೆಯಲ್ಲಿ ಎನ್ಕೌಂಟರ್ ನಡೆಸಿ ಹತ್ಯೆ ಮಾಡಲಾಗಿತ್ತು.
ಆಪರೇಶನ್ ಆಲ್ಔಟ್ ಆರಂಭಿಸಿದ ಬಳಿಕ ಕಣಿವೆ ರಾಜ್ಯದಲ್ಲಿ ನಿರಂತರವಾಗಿ ಉಗ್ರರ ಬಲಿಯಾಗುತ್ತಿದೆ. ಇದು ಭಯೋತ್ಪಾದನೆ ವಿರುದ್ಧ ಹೋರಾಟ ಆರಂಭಿಸಿರುವ ಭಾರತಕ್ಕೆ ಸಕಾರಾತ್ಮಕ ಬೆಳವಣಿಗೆಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.