ನವದೆಹಲಿ: ಅಕ್ರಮವಾಗಿ ಒಳನುಸುಳಿದ ಪ್ರತಿಯೊಬ್ಬ ಬಾಂಗ್ಲಾದೇಶಿಯನನ್ನೂ ಪತ್ತೆ ಮಾಡಿ, ದೇಶದಿಂದ ಹೊರಕ್ಕೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ರಾಜಸ್ಥಾನದ ಜೈಪುರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಒಬ್ಬನೇ ಒಬ್ಬ ಬಾಂಗ್ಲಾದೇಶಿ ನುಸುಳುಕೋರನನ್ನು ಭಾರತದಲ್ಲಿ ಬದುಕಲು ಬಿಜೆಪಿ ಬಿಡುವುದಿಲ್ಲ ಎಂದಿದ್ದಾರೆ.
ಅಸ್ಸಾಂನಲ್ಲಿ ನಡೆಯುತ್ತಿರುವ ನ್ಯಾಷನಲ್ ರಿಜಿಸ್ಟಾರ್ ಆಫ್ ಸಿಟಿಜನ್ಸ್ನ್ನು ವಿರೋಧಿಸುವವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಎನ್ಆರ್ಸಿಯನ್ನು ವಿರೋಧಿಸುವವರು ಮಾನವ ಹಕ್ಕುಗಳ ರಕ್ಷಣೆಯ ಹೆಸರಲ್ಲಿ ವೋಟ್ಬ್ಯಾಂಕ್ ರಾಜಕೀಯ ಮಾಡುವವರು ಎಂದಿದ್ದಾರೆ.
‘ತಮ್ಮ ವೋಟ್ಬ್ಯಾಂಕ್ ಬಗ್ಗೆ ಆತಂಕಕ್ಕೀಡಾಗಿರುವವರು ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ದೇಶದ ಬಗ್ಗೆ ಮತ್ತು ದೇಶದ ಬಡವರ ಬಗ್ಗೆ ಚಿಂತೆ ಇಲ್ಲ’ ಎಂದು ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.