ನವದೆಹಲಿ: ಮ್ಯಾಗಿ ಉತ್ಪನ್ನ ಅಸುರಕ್ಷಿತ ಎಂದು ಭಾರತೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್ಎಸ್ಎಸ್ಎಐ) ನೀಡಿರುವ ಆದೇಶವನ್ನು ಪ್ರಶ್ನಿಸಿ ನೆಸ್ಲೆ ಇಂಡಿಯಾ ಬಾಂಬೆ ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿ ಶುಕ್ರವಾರ ವಿಚಾರಣೆಗೆ ಬರಲಿದೆ.
ಎಫ್ಎಸ್ಎಸ್ಎಐ ಮತ್ತು ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ನೀಡಿದ ಆದೇಶವನ್ನು ಪರಾಮರ್ಶೆಗೆ ಒಳಪಡಿಸಬೇಕೆಂದೂ ಅದು ನ್ಯಾಯಾಲಯವನ್ನು ಕೋರಿದೆ.
ಆಹಾರ ನಿಯಂತ್ರಣ ಆದೇಶಗಳಿಂದ ಕಂಪೆನಿಗೆ ತುಂಬಾ ನಷ್ಟ ಉಂಟಾಗಿದೆ. ಆದ್ದರಿಂದ ಅರ್ಜಿಯನ್ನು ಶೀಘ್ರವೇ ವಿಚಾರಣೆಗೆ ಒಳಪಡಿಸಬೇಕು ಎಂದು ನೆಸ್ಲೆ ವಕೀಲರು ಮನವಿ ಮಾಡಿದ್ದರು.
ಇದೇ ವೇಳೆ ಮ್ಯಾಗಿ ನೂಡಲ್ಸ್ ಉತ್ಪನ್ನಗಳನ್ನು ಹಿಂದೆಗೆದುಕೊಳ್ಳುವುದನ್ನು ಮುಂದುವರಿಸಿದ್ದೇವೆ, ಬಾಂಬೆ ಹೈಕೋರ್ಟ್ ನೀಡುವ ಆದೇಶದ ಬಳಿಕ ಮುಂದಿನ ಹೆಜ್ಜೆಗಳನ್ನು ಇರಿಸುವುದಾಗಿ ಸಂಸ್ಥೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.