ನವದೆಹಲಿ: ರಾಜ್ಯಸಭಾ ಮತ್ತು ವಿಧಾನಪರಿಷತ್ ಚುನಾವಣೆಗಳ ಬ್ಯಾಲೆಟ್ ಪೇಪರ್ನಿಂದ ‘NONE OF THE ABOVE(NOTA)’ ಆಯ್ಕೆಯನ್ನು ಚುನಾವಣಾ ಆಯೋಗ ಮಂಗಳವಾರ ತೆಗೆದು ಹಾಕಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಅನ್ವಯ ಈ ಕ್ರಮವನ್ನು ಕೈಗೊಂಡಿದೆ.
ರಾಜ್ಯಸಭೆ ಚುನಾವಣೆಗೆ ನೋಟ ಆಯ್ಕೆ ನೀಡುವುದನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ.ಎಎಂ ಖಾನ್ವಿಲ್ಕರ್, ಡಿವೈ ಚಂದ್ರಚೂಡ ನೇತೃತ್ವದ ನ್ಯಾಯಪೀಠ ರದ್ದುಗೊಳಿಸಿತ್ತು. ಅಲ್ಲದೇ ಚುನಾವಣಾ ಆಯೋಗ ಅಧಿಸೂಚನೆಯನ್ನು ಪ್ರಶ್ನೆ ಮಾಡಿತ್ತು ಮತ್ತು ನೋಟ ನೇರ ಚುನಾವಣೆಗಳಲ್ಲಿ ಜನರ ಬಳಕೆಗೆ ಮಾತ್ರ ಇರುವುದು ಎಂದಿತ್ತು.
ಸುಪ್ರೀಂ ಆದೇಶವನ್ನು ಚುನಾವಣಾ ಆಯೋಗ ಪಾಲನೆ ಮಾಡಿದ್ದು, ನೋಟ ಆಯ್ಕೆ ರಾಜ್ಯಸಭಾ ಮತ್ತು ವಿಧಾನಪರಿಷತ್ ಚುನಾವಣೆಗಳಿಗೆ ಅನ್ವಯವಾಗುವುದಿಲ್ಲ ಎಂದು ಎಲ್ಲಾ ರಾಜ್ಯಗಳಿಗೂ ನಿರ್ದೇಶನ ನೀಡಿದೆ.
ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ನೋಟ ಆಯ್ಕೆ ಎಂದಿನಂತೆ ಇರಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.