ನವದೆಹಲಿ: ಗೊತ್ತಿದ್ದೋ, ಗೊತ್ತಿಲ್ಲದೆಯೋ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲು ಸೇರಿರುವ ನೂರಾರು ಯುವಕರಿಗೆ ಹೊಸ ಜೀವನವನ್ನು ಕಟ್ಟಿಕೊಳ್ಳಲು ಆಸರೆಯಾಗಿದ್ದಾರೆ ದೆಹಲಿ ಪೊಲೀಸರು.
ಯುವ ಜೈಲು ಹಕ್ಕಿಗಳಿಗೆಂದೇ ದೆಹಲಿ ಪೊಲೀಸರು ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆರಂಭಿಸಿದ್ದಾರೆ. ಯೋಗ, ಆತಿಥ್ಯ, ವ್ಯಾಯಾಮ ಮುಂತಾದ 10 ವಿವಿಧ ಕೌಶಲ್ಯಗಳ ಬಗ್ಗೆ ಇವರಿಗೆ ತರಬೇತಿಯನ್ನು ನೀಡಲಾಗುತ್ತಿದೆ, ಒಟ್ಟು 8 ಪೊಲೀಸ್ ಸ್ಟೇಶನ್ಗಳಲ್ಲಿ ಕೌಶಲ್ಯ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಜೀವನವನ್ನು ಹೊಸದಾಗಿ ಕಟ್ಟಿಕೊಳ್ಳಲು ಪ್ರಯತ್ನಿಸುತ್ತಿರುವ ಮೂಲದ ಭಾರಿ ಅಪರಾಧ ಎಸಗಿ ಜೈಲು ಪಾಲಾದ ಯುವ ಕೈದಿಗಳು ಕೌಶಲ್ಯ ತರಬೇತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಅಪ್ರಾಪ್ತ ಅಪರಾಧಿಗಳೂ ಇದರಲ್ಲಿ ಸೇರಿದ್ದಾರೆ.
3 ಸಾವಿರದಷ್ಟು ಮಂದಿ ಈಗಾಗಲೇ ತರಬೇತಿಯನ್ನು ಪಡೆದುಕೊಂಡಿದ್ದಾರೆ. ಕೆಲವರು ವೃತ್ತಿಯನ್ನೂ ಆರಂಭಿಸಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಯಾದ ಹಿನ್ನಲೆಯಲ್ಲಿ 12 ಪೊಲೀಸ್ ಸ್ಟೇಶನ್ ಗಳಿಗೆ ಇದನ್ನು ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.