ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನೆ ಐವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಶುಕ್ರವಾರ ತಡ ರಾತ್ರಿಯಿಂದ ಈ ಭಾಗದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಆರಂಭಗೊಂಡಿದೆ.
ಕುಲ್ಗಾಂನ ಚೌಗಮ್ ಪ್ರದೇಶದ ಖಾಝಿಗುಂಡ್ನಲ್ಲಿ ಎನ್ ಕೌಂಟರ್ ಮುಂದುವರೆದಿದ್ದು, ಬಾರಾಮುಲ್ಲಾ-ಖಾಝಿಗುಂಡ್ ನಡುವಣ ರೈಲು ಸಂಚಾರ ಸ್ಥಗಿತಗೊಂಡಿದೆ. ಇಂಟರ್ನೆಟ್ ಸೇವೆ ಕೂಡ ಸ್ಥಗಿತಗೊಂಡಿದೆ.
ಹತ್ಯೆಗೀಡಾಗಿರುವ ಐವರು ಉಗ್ರರು ಲಷ್ಕರ್-ಇ-ತೋಯ್ಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರು ಎಂದು ಹೇಳಲಾಗಿದ್ದು, ಮನೆಯೊಂದರಲ್ಲಿ ಇವರು ಅವಿತು ಕುಳಿತಿದ್ದರು.
ಸೇನೆಯ 9 ಆರ್ಆರ್(ರಾಷ್ಟ್ರೀಯ ರೈಫಲ್ಸ್), ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.