ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ ಇಂದಿನಿಂದ ನವದೆಹಲಿಯಲ್ಲಿ ಮೂರು ದಿನಗಳ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜನೆಗೊಳಿಸಿದೆ.
ಅಯೋಧ್ಯೆ ವಿವಾದ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇಲ್ಲಿ ಚರ್ಚೆಯಾಗಲಿದೆ. 3 ದಿನಗಳ ಉಪನ್ಯಾಸಗಳಲ್ಲಿ ದೇಶ ಕೃಷಿ, ಗ್ರಾಮೀಣ ಆರೋಗ್ಯ, ಆರ್ಥಿಕತೆಗೆ ಸಂಬಂಧಿಸಿದ ಚರ್ಚೆಗಳಿಗೂ ಸಮಾನ ಪ್ರಾಶಸ್ತ್ಯ ನೀಡಲಾಗುತ್ತಿದೆ.
ಎಲ್ಲಾ ವಲಯಗಳ 30 ಪ್ರತಿನಿಧಿಗಳನ್ನು ಆಹ್ವಾನಿಸಲಾಗಿದೆ, ಸುಮಾರು 1 ಸಾವಿರ ಅತಿಥಿಗಳು ಇದರಲ್ಲಿ ಭಾಗಿಯಾಗುವ ನೀರಿಕ್ಷೆ ಇದೆ.
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂದು ಪ್ರಮುಖ ಭಾಷಣ ಮಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.