ನವದೆಹಲಿ: ವೇತನ ಸಿಗದ ಹಿನ್ನಲೆಯಲ್ಲಿ ಕಳೆದ 10 ದಿನಗಳಿಂದ ದೆಹಲಿ ಸ್ವಚ್ಛತಾ ಕಾರ್ಮಿಕರು ಧರಣಿ ನಡೆಸುತ್ತಿದ್ದಾರೆ, ಶುಕ್ರವಾರ ಧರಣಿ ಸ್ಥಳಕ್ಕೆ ತೆರಳಿದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕಾರ್ಮಿಕರ ಹೋರಾಟಕ್ಕೆ ಸಾಥ್ ನೀಡುವುದಾಗಿ ಭರವಸೆ ನೀಡಿದ್ದಾರೆ.
ಸುಮಾರು 12 ಸಾವಿರ ಸಫಾಯ್ ಕರ್ಮಚಾರಿಗಳು ತಮ್ಮ ಕಾರ್ಯವನ್ನು ಸ್ಥಗಿತಗೊಳಿಸಿ ಧರಣಿ ನಡೆಸುತ್ತಿದ್ದಾರೆ, ಇದರಿಂದಾಗಿ ದೆಹಲಿಯಲ್ಲಿ ಟನ್ಗಟ್ಟಲೆ ಕಸಗಳು ವಿಲೇವಾರಿಯಾಗದೆ ರಾಶಿ ಬಿದ್ದಿವೆ.
ಈ ಬಗ್ಗೆ ಕೇಂದ್ರ ಮತ್ತು ದೆಹಲಿ ಸರ್ಕಾರಗಳ ವಿರುದ್ಧ ಹರಿಹಾಯ್ದಿರುವ ರಾಹುಲ್, ‘ದೆಹಲಿ ಸರ್ಕಾರದ ಬಳಿ ಹೋದರೆ ಇದು ಕೇಂದ್ರದ ಜವಾಬ್ದಾರಿ ಎನ್ನುತ್ತದೆ, ಕೇಂದ್ರದ ಬಳಿ ಹೋದರೆ ಇದು ದೆಹಲಿಯ ಜವಾಬ್ದಾರಿ ಎನ್ನುತ್ತದೆ. ನಿಮ್ಮ ಶಕ್ತಿಯನ್ನು ಪ್ರದರ್ಶಿಸದ ವಿನಃ ನಿಮಗೆ ಏನೂ ಸಿಗುವುದಿಲ್ಲ’ ಎಂದು ಕಾರ್ಮಿಕರಿಗೆ ಕಿವಿ ಮಾತು ಹೇಳಿದ್ದಾರೆ.
ಅಲ್ಲದೇ ನಿಮ್ಮ ಪ್ರತಿಭಟನೆಯ ಜವಾಬ್ದಾರಿಯನ್ನು ನಾನು ಹೊರುವುದಾಗಿ ಅವರಿಗೆ ಭರವಸೆಯನ್ನೂ ನೀಡಿದ್ದಾರೆ. ಅಲ್ಲದೇ ಮೇಯರ್ಗಳೊಂದಿಗೆ ಮಾತುಕತೆ ನಡೆಸಿ ಸಂಬಳ ಪಾವತಿಸಲು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.