ಮುಂಬಯಿ: ಸೋಮವಾರ 68ನೇ ಜನ್ಮದಿನವನ್ನು ಆಚರಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ, ಖ್ಯಾತ ಪ್ಯಾರಾ ಜಂಪರ್ ಶೀತಲ್ ಮಹಾಜನ್ ಅವರು ವಿಭಿನ್ನ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ.
ಮೋದಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸುವ ಪೋಸ್ಟರ್ ಹಿಡಿದು ಅವರು, ಯುಎಸ್ನ ಚಿಕಾಗೋದಲ್ಲಿ 13,000 ಅಡಿ ಎತ್ತರದಿಂದ ಪ್ಯಾರಾ ಜಂಪ್ ಮಾಡಿದ್ದಾರೆ.
ತಮ್ಮ ಈ ಜಂಪ್ನ ವೀಡಿಯೋವನ್ನು ಶೀತಲ್ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದು, ಕಳೆದ ನಾಲ್ಕು ವರ್ಷಗಳಿಂದ ಮೋದಿಯವರನ್ನು ಭೇಟಿಯಾಗಲು ಪ್ರಯತ್ನಿಸುತ್ತಿದ್ದೇನೆ, ಆದರೆ ಇದುವರೆಗೆ ಸಾಧ್ಯವಾಗಿಲ್ಲ. ಈ ವೀಡಿಯೋದಿಂದಾದರೂ ಅವರ ಭೇಟಿಯಾಗಲು ನನಗೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇದೆ ಎಂದಿದ್ದಾರೆ.
ಶೀತಲ್ ಮಹಾಜನ್ ಅವರು ಪದ್ಮಶ್ರೀ ಪ್ರಶಸ್ತಿ ವಿಜೇತ ಪ್ಯಾರಾ ಜಂಪರ್ ಆಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.