ನವದೆಹಲಿ: ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ ಹಲವಾರು ಸಂವಾದ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು, 2019ರ ಸಾರ್ವತ್ರಿಕ ಚುನಾವಣೆಗೂ ಮುಂಚಿತವಾಗಿ ಬಹುತೇಕ ಎಲ್ಲಾ ಲೋಕಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರನ್ನು ನೇರವಾಗಿ ಭೇಟಿಯಾಗಲು ಬಯಸಿದ್ದಾರೆ.
ಎಲ್ಲಾ 543 ಕ್ಷೇತ್ರಗಳ ಕಾರ್ಯಕರ್ತರು ಕೂಡ ಮೋದಿಯನ್ನು ಸಂಪರ್ಕಿಸುವಂತೆ ಮಾಡುವ ಸಲುವಾಗಿ ಬಿಜೆಪಿ ಸಾಮಾಜಿಕ ಜಾಲತಾಣಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ. ಈಗಾಗಲೇ ಸರ್ಕಾರ ಮತ್ತು ಪಕ್ಷದ ಕಾರ್ಯಕ್ರಮಗಳ ಮೂಲಕ ಅವರು ಸುಮಾರು 300 ಕ್ಷೇತ್ರಗಳಿಗೆ ಭೇಟಿಯಿತ್ತಿದ್ದಾರೆ.
ಕಾರ್ಯಕರ್ತರು ಮೋದಿಯವರೊಂದಿಗೆ ನೇರ ಸಂವಾದದಲ್ಲಿ ಭಾಗಿಯಾಗುವುದರಿಂದ ಅವರಿಗೆ ಹೆಚ್ಚಿನ ಪ್ರೇರಣೆ, ಉತ್ಸಾಹ ಸಿಗಲಿದೆ. ತಮ್ಮ ಮಾತು ಮತ್ತು ಸಲಹೆ, ಸೂಚನೆಗಳ ಮೂಲಕ ಮೋದಿ ಅವರನ್ನು ಹುರಿದುಂಬಿಸಲಿದ್ದಾರೆ ಎಂಬುದು ಬಿಜೆಪಿ ಆಶಯವಾಗಿದೆ.
Source: Hindustan Times
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.