ನವದೆಹಲಿ: ತ್ರಿವಳಿ ತಲಾಖ್ ಪದ್ಧತಿಯನ್ನು ಶಿಕ್ಷಾರ್ಹ ಅಪರಾಧವನ್ನಾಗಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿಗೊಳಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಸಂಸತ್ತಿನ ಉಭಯ ಸದನಗಳಲ್ಲಿ ತ್ರಿವಳಿ ತಲಾಖ್ ಮಸೂದೆಯನ್ನು ಮಂಡನೆಗೊಳಿಸಲು ವಿಫಲವಾದ ಹಿನ್ನಲೆಯಲ್ಲಿ, ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲು ಕೇಂದ್ರ ನಿರ್ಧರಿಸಿದೆ.
ಕಳೆದ ವರ್ಷ ಲೋಕಸಭೆಯಲ್ಲಿ ಧ್ವನಿ ಮತದೊಂದಿಗೆ ಅಂಗೀಕಾರಗೊಂಡ ‘ವಿವಾಹ ಕಾಯ್ದೆಯಲ್ಲಿ ಮುಸ್ಲಿಂ ಮಹಿಳೆಯರ ಹಕ್ಕುಗಳ ರಕ್ಷಣೆ’ ಕಾಯ್ದೆಯಲ್ಲಿನ ನಿಬಂಧನೆಗಳು ಈ ಸುಗ್ರೀವಾಜ್ಞೆಯಲ್ಲೂ ಇರಲಿವೆ.
ಏಕಕಾಲಕ್ಕೆ ತಲಾಖ್ ಎಂದು ಮೂರು ಬಾರಿ ಉಚ್ಚರಿಸಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಕಳುಹಿಸಿ ವಿಚ್ಛೇದನ ನೀಡುವುದನ್ನು ಇದು ಶಿಕ್ಷಾರ್ಹ ಅಪರಾಧವನ್ನಾಗಿ ಪರಿಗಣಿಸುತ್ತದೆ.
Source: Zee News
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.