ಮಂಗಳೂರು : ವಿಶ್ವಯೋಗ ದಿನದ ಪೂರ್ವಭಾವಿ ಸಭೆಯು ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ಪ್ರಸಾದ್ ಕುಮಾರ್ರವರ ಮಾರ್ಗದರ್ಶನದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಜೂ.21 ರಂದು ಜಿಲ್ಲೆಯ 8 ಮಂಡಲಗಳಲ್ಲಿ ಸ್ಥಳೀಯವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ನಡೆಯುವ ಯೋಗದ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳುವಂತೆ ಮಾಡಲು ನಿರ್ಣಯಿಸಲಾಯಿತು.
ಸಭೆಯಲ್ಲಿ ಯೋಗ ಪ್ರಮುಖರಾದ ಶಿಕಾರಿಪುರ ಕೃಷ್ಣಮೂರ್ತಿ, ನಾರಾಯಣ ಶೆಟ್ಟಿ ಮತ್ತು ಜಗದೀಶ್ ಶೆಟ್ಟಿಯವರು ತಮ್ಮ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ, ಯೋಗ ಪ್ರಮುಖರಾದ ಡಾ|ರಘುವೀರ್, ಪೂವಪ್ಪ ವಿ.ಯವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.