ನವದೆಹಲಿ: ಕ್ರಿಕೆಟಿಗ ವಿರಾಟ್ ಕೊಹ್ಲಿ, ವೇಟ್ ಲಿಫ್ಟರ್ ಮೀರಾಭಾಯ್ ಚಾನು ಅವರಿಗೆ ಮಂಗಳವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು, ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಕಳೆದ ಒಂದು ವರ್ಷದಲ್ಲಿ ವಿವಿಧ ಕ್ರೀಡೆಗಳಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ ಆಟಗಾರರನ್ನು ಆಯ್ಕೆ ಮಾಡಿ ಅವರಿಗೆ ವಿವಿಧ ‘ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ’ಗಳನ್ನು ನೀಡಲಾಗಿದೆ.
ಸಚಿನ್ ತೆಂಡೂಲ್ಕರ್ ಮತ್ತು ಮಹೇಂದ್ರ ಸಿಂಗ್ ದೋನಿ ಅವರ ಬಳಿಕ ರಾಜೀವ್ ಗಾಂಧಿ ಖೇಲ್ ರತ್ನ ಪಡೆದ ಮೂರನೇ ಕ್ರಿಕೆಟಿಗ ಕೊಹ್ಲಿ ಆಗಿದ್ದಾರೆ.
ಜಾವೆಲಿನ್ ಎಸೆತಗಾರ ನೀರಜ್ ಛೋಪ್ರಾ, ಓಟಗಾರ್ತಿ ಹಿಮಾದಾಸ್, ಕ್ರಿಕೆಟ್ ಆಟಗಾರ್ತಿ ಸ್ಮೃತಿ ಮಂದಾನಾ ಸೇರಿದಂತೆ 20 ಆಟಗಾರರಿಗೆ ಅರ್ಜುನ ಪ್ರಶಸ್ತಿಯನ್ನು ರಾಜಭವನದಲ್ಲಿ ಪ್ರದಾನ ಮಾಡಲಾಗಿದೆ. ಐವರು ಕೋಚ್ಗಳಿಗೆ ದ್ರೋಣಾಚಾರ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Source: The Indian Express
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.