ನವದೆಹಲಿ: ವಿವಿಧ ಕ್ರಮಗಳ ಮೂಲಕ ಈ ಪ್ರಸಕ್ತ ಸಾಲಿನ ಹಣಕಾಸು ವರ್ಷದಲ್ಲಿ ಸುಮಾರು ರೂ.1.8 ಲಕ್ಷ ಕೋಟಿಗಳಷ್ಟು ಕೆಟ್ಟ ಸಾಲಗಳನ್ನು ಮರಳಿ ಪಡೆಯುವ ಗುರಿಯನ್ನು ಸರ್ಕಾರ ಹೊಂದಿದೆ.
ದೆಹಲಿಯಲ್ಲಿ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ವಿತ್ತ ಸಚಿವ ಅರುಣ್ ಜೇಟ್ಲಿ, ‘ಕೆಟ್ಟ ಸಾಲಗಳ ಹಲವಾರು ಪ್ರಕರಣಗಳು ಇತ್ಯರ್ಥದ ಹಂತದಲ್ಲಿವೆ. ಬ್ಯಾಂಕುಗಳು ಮತ್ತು ಹಣಕಾಸು ಸೇವಾ ಇಲಾಖೆಗಳು ಇವುಗಳನ್ನು ಮರಳಿ ಪಡೆಯುವ ಬಗ್ಗೆ ಆಶಾದಾಯಕವಾಗಿವೆ’ ಎಂದಿದ್ದಾರೆ.
ಕಳೆದ ಹಣಕಾಸು ವರ್ಷದಲ್ಲಿ ಸುಮಾರು 75 ಸಾವಿರ ಕೆಟ್ಟ ಸಾಲಗಳನ್ನು ಮರಳಿ ಪಡೆಯಲಾಗಿದ್ದು, ಈ ಬಾರಿ ರೂ.1.8 ಲಕ್ಷ ಕೋಟಿಗಳನ್ನು ಮರಳಿ ಪಡೆಯುವ ಗುರಿ ಹೊಂದಲಾಗಿದೆ ಎಂದು ಹಣಕಾಸು ಕಾರ್ಯದರ್ಶಿ ರಾಜೀವ್ ಕುಮಾರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.