ನವದೆಹಲಿ: ವಾಯುಮಾಲಿನ್ಯದಿಂದ ತತ್ತರಿಸಿರುವ ದೆಹಲಿಯಲ್ಲಿ ಎರಡು ವಾಯು ಮಾಲಿನ್ಯ ನಿಯಂತ್ರಣ ಡಿವೈಸ್ಗಳನ್ನು ಅಳವಡಿಸಲಾಗಿದೆ. WAYU (wind augmentation purifying unit ) ಎಂಬ ಹೆಸರಿನ ಈ ಡಿವೈಸ್ ನ್ನು ಐಟಿಒ ಮತ್ತು ಮುಕರ್ಬದಲ್ಲಿ ಅಳವಡಿಸಲಾಗಿದೆ.
ಕೇಂದ್ರ ಪರಿಸರ ಸಚಿವ ಡಾ.ಹರ್ಷವರ್ಧನ್ ಅವರು ಈ ಡಿವೈಸ್ನ್ನು ಅಳವಡಿಸಿದ್ದು, ಇಂತಹ ಇನ್ನೂ 54 ಡಿವೈಸ್ಗಳನ್ನು ಅಲ್ಲಲ್ಲಿ ಅಳವಡಿಸುವ ಯೋಜನೆ ಇದೆ ಎಂದು ತಿಳಿಸಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುದಾನದೊಂದಿಗೆ ಕೌನ್ಸಿಲ್ ಆಫ್ ಸೈಂಟಿಫಿಕ್ ಆಂಡ್ ಇಂಡಸ್ಟ್ರಿಯಲ್ ರಿಸರ್ಚ್, ನ್ಯಾಷನಲ್ ಎನ್ವಿರಾನ್ಮೆಂಟ್ ಎಂಜಿನಿಯರಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ ಈ ಡಿವೈಸ್ನ್ನು ಅಭಿವೃದ್ಧಿಪಡಿಸಿದೆ.
ಈ ಒಂದು ಡಿವೈಸ್ ಸುಮಾರು 500 ಚದರ ಮೀಟರ್ ವ್ಯಾಪ್ತಿಯ ಗಾಳಿಯನ್ನು ಶುದ್ಧೀಕರಿಸುವ ಸಾಮರ್ಥ್ಯವನ್ನು ಹೊಂದಿದೆ. 10 ಸಾವಿರ ಚದರ ಮೀಟರ್ ವ್ಯಾಪ್ತಿಯ ಗಾಳಿಯನ್ನು ಶುದ್ಧೀಕರಿಸುವ ಡಿವೈಸ್ನ್ನು ಅಭಿವೃದ್ಧಿಪಡಿಸಲಾಗುತ್ತಿದೆ.
Source: Times Of India
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.