ನವದೆಹಲಿ: ಅಂತಾರಾಷ್ಟ್ರೀಯ ಸೋಲಾರ್ ಅಲೈಯನ್ಸ್ನಲ್ಲಿ ಚಾಂಪಿಯನ್ಗಳಾಗಿ ಕಾರ್ಯನಿರ್ವಹಿಸಿದ ಮತ್ತು ಪರಿಸರ ಕಾರ್ಯಗಳಲ್ಲಿ ಹೊಸ ಮಟ್ಟದ ಸಹಕಾರವನ್ನು ಸಾಧಿಸಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರೋನ್ ಅವರಿಗೆ ವಿಶ್ವಸಂಸ್ಥೆ ‘ಚಾಂಪಿಯನ್ಸ್ ಆಫ್ ಅರ್ಥ್ ಅವಾರ್ಡ್’ ನೀಡಿ ಪುರಸ್ಕರಿಸಿದೆ.
2022ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪ್ಲಾಸ್ಟಿಕ್ ಬಳಕೆಯಾಗದಂತೆ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಗುರಿಯನ್ನು ವಿಶ್ವಸಂಸ್ಥೆ ಮಾನ್ಯ ಮಾಡಿದೆ. ಅಲ್ಲದೇ ಪರಿಸರದ ಬಗೆಗಿನ ಜಾಗತಿಕ ಒಪ್ಪಂದಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮ್ಯಾಕ್ರೋನ್ ಕಾರ್ಯವನ್ನೂ ಮಾನ್ಯ ಮಾಡಿದೆ.
2015ರ ನವೆಂಬರ್ನಲ್ಲಿ ವಿಂಬ್ಲೇ ಸ್ಟೇಡಿಯಂನಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರು, ಇಂಟರ್ನ್ಯಾಷನಲ್ ಸೋಲಾರ್ ಅಲೈಯನ್ಸ್ ಬಗ್ಗೆ ಪ್ರಸ್ತಾಪ ಮಾಡಿದ್ದರು. 121 ದೇಶಗಳು ಈ ಅಲೈಯನ್ಸ್ನಡಿ ಇದ್ದು, ಇಂಧನಗಳ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಸೋಲಾರ್ ಎನರ್ಜಿಯನ್ನು ಉತ್ತೇಜಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
‘ಚಾಂಪಿಯನ್ಸ್ ಆಫ್ ಅರ್ಥ್ ಅವಾರ್ಡ್’ ಪಾಲಿಸಿ ಲೀಡರ್ಶಿಪ್ ಕೆಟಗರಿಯಲ್ಲಿ ಕೊಡಲಾಗುವ ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಪ್ರಶಸ್ತಿಯಾಗಿದೆ. ಪರಿಸರದ ಮೇಲೆ ಸಕಾರಾತ್ಮಕ ಪ್ರಭಾವ ಬೀರುವಂತಹ ಕಾರ್ಯ ಮಾಡಿದ ಖಾಸಗಿ, ಸಾರ್ವಜನಿಕ, ನಾಗರಿಕ ಸಮಾಜದ ಜನರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
source: timesnow.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.