ನವದೆಹಲಿ: ಇತಿಹಾಸ ಪ್ರಸಿದ್ಧ ಶಬರಿಮಲೆ ದೇಗುಲಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ತೀರ್ಪು ನೀಡಿದೆ. ಇದುವರೆಗೆ ಅಲ್ಲಿ 10ರಿಂದ 50 ವರ್ಷ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಇತ್ತು.
‘ದೈಹಿಕ ಪ್ರಕ್ರಿಯೆಯನ್ನು ಮುಂದಿಟ್ಟುಕೊಂಡು ಮಹಿಳಾ ಹಕ್ಕನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಅಯ್ಯಪ್ಪನ ಭಕ್ತರು ಹಿಂದೂಗಳು, ಅವರಿಗೆ ಪ್ರತ್ಯೇಕ ಪಂಥ ಇಲ್ಲ. ಶಬರಿಮಲೆ ದೇಗುಲ ವಿಧಿಸಿರುವ ನಿರ್ಬಂಧವನ್ನು ಅತ್ಯಗತ್ಯ ಧಾರ್ಮಿಕ ಆಚರಣೆ ಎಂದು ಪರಿಗಣಿಸಲು ಸಾಧ್ಯವಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
’10ರಿಂದ 50 ವರ್ಷದ ಮಹಿಳೆಯರನ್ನು ದೇಗುಲದ ಒಳಗೆ ಪ್ರವೇಶಿಸದಂತೆ ಮಾಡುವುದು ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾದುದು’ ಎಂದು ಹೇಳಿದೆ.
‘ಪೂಜಿಸುವ ಹಕ್ಕಲ್ಲಿ ಲಿಂಗ ತಾರತಮ್ಯ ಮಾಡಲು ಸಾಧ್ಯವಿಲ್ಲ, ಹೆಣ್ಣನ್ನು ದೇವತೆಯಂತೆ ಕಾಣುವ ನೆಲದಲ್ಲಿ ಇಂತಹ ನಿರ್ಬಂಧಗಳಿಗೆ ಅವಕಾಶವೂ ಇಲ್ಲ’ ಎಂದಿದೆ.
source: zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.