ನವದೆಹಲಿ: ಭೀಮಾ-ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಅರ್ಬನ್ ನಕ್ಸಲರ ಗೃಹ ಬಂಧನವನ್ನು ಇನ್ನೂ ನಾಲ್ಕು ವಾರಗಳ ಕಾಲ ವಿಸ್ತರಣೆ ಮಾಡುವುದಕ್ಕೆ ಸುಪ್ರೀಂಕೋರ್ಟ್ ಸಮ್ಮತಿ ನೀಡಿದೆ.
ವರವರ ರಾವ್, ಅರುಣ್ ಫೆರೀರಾ, ವರ್ನನ್ ಗೋನ್ಸಾಲ್ವ್ಸ್ , ಸುಧಾ ಭಾರಧ್ವಜ್, ಗೌತಮ್ ನವ್ಲಕ ಇವರುಗಳನ್ನು ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಪಡಿಸಲಾಗಿತ್ತು.
ಅರ್ಬನ್ ನಕ್ಸಲರ ಬಂಧನ ರಾಜಕೀಯ ಭಿನ್ನಾಭಿಪ್ರಾಯದ ಕಾರಣಕ್ಕಾಗಿ ಅಥವಾ ಅಸಮ್ಮತಿಯ ಕಾರಣಕ್ಕೆ ಆಗಿರುವುದಲ್ಲ ಎಂದು ಸುಪ್ರೀಂ ಸ್ಪಷ್ಟಪಡಿಸಿದೆ.
ಅಲ್ಲದೇ ತನಿಖೆಯನ್ನು ಎಸ್ಐಟಿಗೆ ವಹಿಸಬೇಕು ಎಂಬ ಇವರುಗಳ ಮನವಿಯನ್ನೂ ತಳ್ಳಿ ಹಾಕಿದ್ದು, ಆರೋಪಿಗಳಿಗೆ ಯಾವ ಸಂಸ್ಥೆ ತಮ್ಮ ಪ್ರಕರಣದ ತನಿಖೆಯನ್ನು ನಡೆಸಬೇಕು ಎಂದು ನಿರ್ಧರಿಸುವ ಹಕ್ಕಿಲ್ಲ ಎಂದು ಪ್ರತಿಪಾದಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.