ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣಾ ಫಲಿತಾಂಶ ಕೊನೆಗೂ ಹೊರಬಿದ್ದಿದೆ. ಹೈಡ್ರಾಮಾಗಳ ನಡುವೆ ಮೈತ್ರಿ ಪಕ್ಷಗಳು ಚುನಾವಣೆಯನ್ನು ಗೆದ್ದಿದ್ದು, ಕಾಂಗ್ರೆಸ್ನ ಗಂಗಾಂಬಿಕ ಮಲ್ಲಿಕಾರ್ಜುನ ಮೇಯರ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಜೆಡಿಎಸ್ನ ರಮೀಳಾ ಉಮಾಶಂಕರ್ ಉಪಮೇಯರ್ ಆಗಿದ್ದಾರೆ.
259 ವಾರ್ಡ್ಗಳಿರುವ ಬಿಬಿಎಂಪಿ ಮೇಯರ್, ಉಪ ಮೇಯರ್ ಚುನಾವಣೆ ಅಕ್ಷರಶಃ ರಣಾಂಗಣವಾಗಿತ್ತು. ಕಿತ್ತಾಟ, ಗುದ್ದಾಟಗಳ ಬಳಿಕ ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ್ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಿತು. ಬಿಜೆಪಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿತ್ತು.
ಕಾಂಗ್ರೆಸ್-ಜೆಡಿಎಸ್ಗೆ 8 ಪಕ್ಷೇತರರ ಬೆಂಬಲ ಸಿಕ್ಕಿದ್ದು, 136 ಸದಸ್ಯರ ಬೆಂಬಲದೊಂದಿಗೆ ಗಂಗಾಬಿಕ ಮೇಯರ್ ಆಗಿ, ರಮೀಳಾ ಉಪ ಮೇಯರ್ ಆಗಿ ಆಯ್ಕೆಯಾದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.