ನವದೆಹಲಿ; ಉಜ್ಬೇಕಿಸ್ತಾನ ಅಧ್ಯಕ್ಷ ಶೌಕತ್ ಮಿರ್ಝಿಯೊಯೆವ್ ಅವರು ಭಾನುವಾರ ಭಾರತಕ್ಕೆ ಆಗಮಿಸಲಿದ್ದು, ಇದು ಅವರ ಮೊತ್ತ ಮೊದಲ ಅಧಿಕೃತ ಭಾರತ ಭೇಟಿಯಾಗಿದೆ.
ಉನ್ನತ ಮಟ್ಟದ ನಿಯೋಗದೊಂದಿಗೆ ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸುವ ಅವರು, ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಸೆ.30ರಂದು ಅವರು ಆಗ್ರಾಗೆ ತೆರಳಲಿದ್ದಾರೆ, ಸೋಮವಾರ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತವನ್ನು ಪಡೆಯಲಿದ್ದಾರೆ. ಬಳಿಕ ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧೀಜಿಯವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಹೈದರಾಬಾದ್ಹೌಸ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಅವರು ನಿಯೋಗ ಮಟ್ಟದ ಮಾತುಕತೆಯನ್ನು ನಡೆಸಲಿದ್ದಾರೆ. ಅಲ್ಲದೇ ಶೌಕತ್ ಅವರು ರಾಷ್ಟ್ರಪತಿ, ಉಪರಾಷ್ಟ್ರಪತಿ, ವಿದೇಶಾಂಗ ಸಚಿವೆಯೊಂದಿಗೂ ಮಾತುಕತೆಯನ್ನು ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.