ನವದೆಹಲಿ: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಇಂದು 73 ವಸಂತಗಳನ್ನು ಪೂರೈಸಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, ‘ರಾಷ್ಟ್ರಪತಿ ಜೀ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಾರತ ಅವರ ಪಾಂಡಿತ್ಯ ಹಾಗೂ ವಿವಿಧ ವಿಷಯಗಳ ಮೇಲಿನ ದೃಷ್ಟಿಕೋನದಿಂದ ಸಾಕಷ್ಟು ಪ್ರಯೋಜನ ಪಡೆದುಕೊಂಡಿದೆ. ಸಮಾಜದ ಪ್ರತಿಯೊಂದು ವರ್ಗಗಳನ್ನೂ ಅವರು ಅದ್ಭುತ ರೀತಿಯಲ್ಲಿ ಕನೆಕ್ಟ್ ಆಗಿದ್ದಾರೆ. ಅವರ ದೀರ್ಘ ಆಯುಷ್ಯ, ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.
1945ರ ಅಕ್ಟೋಬರ್ 1ರಂದು ಉತ್ತರಪ್ರದೇಶದ ಕಾನ್ಪುರ ಜಿಲ್ಲೆಯ ಪರೌಕ್ ಗ್ರಾಮದಲ್ಲಿ ಇವರು ಜನಿಸಿದರು.
2017ರ ಜುಲೈ 25ರಂದು ದೇಶದ 14ನೇ ರಾಷ್ಟ್ರಪತಿಯಾಗಿ ಇವರು ಅಧಿಕಾರವನ್ನು ಸ್ವೀಕರಿಸಿದರು.
Best wishes to Rashtrapati Ji on his birthday. India has benefitted greatly from his wisdom and perspectives on various subjects. He has connected wonderfully with every section of our society. I pray for his long and healthy life. @rashtrapatibhvn
— Narendra Modi (@narendramodi) October 1, 2018
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.