ನವದೆಹಲಿ: ಭಾರತ ಪ್ರವಾಸದಲ್ಲಿರುವ ಉಜ್ಬೇಕಿಸ್ಥಾನ ಅಧ್ಯಕ್ಷ ಶೌಕತ್ ಮಿರ್ಜಿಯೋವೆವ್ ಅವರು, ಸೋಮವಾರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆಯನ್ನು ನಡೆಸಿದರು.
ವ್ಯಾಪಾರ, ಹೂಡಿಕೆ, ಪ್ರವಾಸೋದ್ಯಮ, ಶಿಕ್ಷಣ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಉಭಯ ನಾಯಕರ ನಡುವೆ ಚರ್ಚೆಗಳು ನಡೆದಿದೆ.
ಇಂದು ಬೆಳಿಗ್ಗೆ ಶೌಕತ್ ಮತ್ತು ಅವರ ಪತ್ನಿ, ರಾಜ್ಘಾಟ್ಗೆ ತೆರಳಿ ಮಹಾತ್ಮ ಗಾಂಧೀಜಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಈ ವೇಳೆ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಉಪಸ್ಥಿತರಿದ್ದರು.
ಬಳಿಕ ರಾಷ್ಟ್ರಪತಿ ಭವನದಲ್ಲಿ ಔಪಚಾರಿಕ ಸ್ವಾಗತವನ್ನು ಪಡೆದ ಅವರು, ಪ್ರತಿಯೊಬ್ಬ ಉಜ್ಬೇಕ್ ಪ್ರಜೆಯ ಹೃದಯದಲ್ಲೂ ಭಾರತಕ್ಕೆ ವಿಶೇಷವಾದ ಸ್ಥಾನವಿದೆ ಎಂದರು.
ಇದು ಶೌಕತ್ ಅವರ ಮೊತ್ತ ಮೊದಲ ಎರಡು ದಿನಗಳ ಅಧಿಕೃತ ಭಾರತ ಭೇಟಿಯಾಗಿದ್ದು, ಇಂದು ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಹೈದರಾಬಾದ್ಹೌಸ್ನಲ್ಲಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.