ನವದೆಹಲಿ: ಜಮ್ಮು ಕಾಶ್ಮೀರದಲ್ಲಿರುವ ಸುಪ್ರಸಿದ್ಧ ಶ್ರೀ ಮಾತಾ ವೈಷ್ಣೋ ದೇವಿ ದೇಗುಲ ದೇಶದ ಅತ್ಯಂತ ಸ್ವಚ್ಛ ಧಾರ್ಮಿಕ ಸ್ಥಳವೆಂಬ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸಮುದಾಯ ಭಾಗವಹಿಸುವಿಕೆಯ ಮೂಲಕ ಸ್ವಚ್ಛತೆಯಲ್ಲಿ ಮಹತ್ವದ ಮೈಲಿಗಲ್ಲನ್ನು ಈ ದೇಗುಲ ಸಾಧಿಸಿದ್ದು, 2018ರ ಸ್ವಚ್ಛತಾ ಅವಾರ್ಡ್ನ್ನು ತನ್ನದಾಗಿಸಿಕೊಂಡಿದೆ.
ಪ್ರತಿವರ್ಷ ಮಾತಾ ವೈಷ್ಣೋ ದೇವಿ ದೇಗುಲಕ್ಕೆ ಸುಮಾರು 81 ಲಕ್ಷ ಯಾತ್ರಾರ್ಥಿಗಳು ಆಗಮಿಸುತ್ತಾರೆ.
ಈ ದೇಗುಲದಲ್ಲಿ ಸುಮಾರು 3 ಸಾವಿರ ಉದ್ಯೋಗಿಗಳಿದ್ದಾರೆ, ಇದರಲ್ಲಿ ಕಾಲು ಭಾಗ ಸ್ವಚ್ಛತಾ ಉದ್ಯೋಗಿಗಳು ಎಂದು ದೇಗುಲ ಮಂಡಳಿಯ ಸಿಇಓ ಧೀರಜ್ ಗುಪ್ತಾ ಹೇಳಿದ್ದಾರೆ.
ಈ ವರ್ಷದ ಜೂನ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಈ ದೇಗುಲದಲ್ಲಿ ಪಾತ್ವೇ ಮತ್ತು ರೋಪ್ವೇ ಯೋಜನೆಗಳಿಗೆ ಚಾಲನೆಯನ್ನ ನೀಡಿದ್ದರು. ಸ್ವಚ್ಛ ಭಾರತದ ಪ್ರಾಯೋಗಿಕ ಕಾರ್ಯಕ್ರಮಗಳ ಭಾಗವಾಗಿರುವ ಈ ದೇಗುಲ ಐಕಾನಿಕ್ ಸ್ಥಳಗಳಲ್ಲಿ ಒಂದು ಎಂದು ಪರಿಗಣಿತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.