ನವದೆಹಲಿ: ಸುಪ್ರೀಂಕೋರ್ಟ್ನ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ರಂಜನ್ ಗೋಗಯ್ ಅವರು ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಷ್ಟ್ರಪತಿ ರಾಮನಾಥ ಕೋವಿಂದ್ ಇವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಗೋಗಯ್ ಅವರು ಈಶಾನ್ಯ ರಾಜ್ಯಕ್ಕೆ ಸೇರಿದ ಮೊತ್ತ ಮೊದಲ ಮುಖ್ಯ ನ್ಯಾಯಮೂರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ, ಅವರ ಅಧಿಕಾರವಧಿ ಮುಂದಿನ ವರ್ಷದ ನವೆಂಬರ್ಗೆ ಪೂರ್ಣಗೊಳ್ಳಲಿದೆ.
2001ರಲ್ಲಿ ಗುವಾಹಟಿ ಹೈಕೋರ್ಟ್ನ ಖಾಯಂ ಜಡ್ಜ್ ಆಗಿ ವೃತ್ತಿ ಜೀವನ ಆರಂಭಿಸಿದ ಗೋಗಯ್ ಅವರು, ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸಿದ್ದಾರೆ. 2011ರಲ್ಲಿ ಅಲ್ಲಿನ ಮುಖ್ಯ ನ್ಯಾಯಮೂರ್ತಿಯಾದರು.
2012ರ ಎಪ್ರಿಲ್ 23ರಂದು ಗೋಗಯ್ ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾದರು.
source: Hindustantimes
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.