×
Home About Us Advertise With s Contact Us

ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಒಂದು ದಿನದ ಗಣಿತಶಾಸ್ತ್ರ ಕಾರ್ಯಾಗಾರ

ಮಂಗಳೂರು : ದೈನಂದಿನ ಬದುಕಿನಲ್ಲಿ ನಮಗೆ ಗಣಿತ ಶಾಸ್ತ್ರದ ಅಗತ್ಯವಿದೆ. ಪ್ರತಿಯೊಬ್ಬ ವ್ಯಕ್ತಿಯ ಪ್ರತಿಯೊಂದು ಕಾರ್ಯ ಚಟುವಟಿಕೆಯ ಸಂದರ್ಭದಲ್ಲೂ ಅದು ಪ್ರಧಾನ ಪಾತ್ರವಹಿಸುತ್ತದೆ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಪ್ರೊ| ಎಂ.ಬಿ.ಪುರಾಣಿಕ್ ಅವರು ಅಭಿಪ್ರಾಯಪಟ್ಟರು.

ಅವರು ದ.ಕ.ಜಿಲ್ಲೆಯ ಪ.ಪೂ.ಕಾಲೇಜುಗಳ ಗಣಿತಶಾಸ್ತ್ರ ಉಪನ್ಯಾಸಕರುಗಳಿಗಾಗಿ ಶಾರದಾ ಪ.ಪೂ ಕಾಲೇಜಿನ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ದ.ಕ. ಜಿಲ್ಲಾ ಉಸ್ತುವಾರಿ ಉಪನಿರ್ದೇಶಕರಾದ ಶ್ರೀಮತಿ ಎಲ್ವಿರಾ ಫಿಲೋಮಿನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ದ.ಕ.ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಶ್ರೀ ಕೆ.ಕೆ. ಉಪಾಧ್ಯಾಯ, ಶಾರದಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮಹಾಬಲೇಶ್ವರ ಭಟ್ ಎಸ್., ದ.ಕ. ಜಿಲ್ಲಾ ಗಣಿತಶಾಸ್ತ್ರ ಸಂಘದ ಅಧ್ಯಕ್ಷರಾದ ಲಾರೆನ್ಸ್ ಸಿಕ್ವೇರಾ, ಕಾರ್ಯದರ್ಶಿಗಳಾದ ಶರಿಟಾ ಬಿ. ಮೊದಲಾದವರು ಉಪಸ್ಥಿತರಿದ್ದರು.

ಉಡುಪಿಯ ಪೂರ್ಣ ಪ್ರಜ್ಞಾ ಪ್ರಥಮ ದರ್ಜೆ ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ರಾಘವೇಂದ್ರ ರಾವ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು.

ಶಾರದಾ ಪ.ಪೂ. ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕಿಯರಾದ ಶ್ರೀಮತಿ ಅನುಪಮಾ ಜಿ.ಕೆ, ಶ್ರೀಮತಿ ಅಶ್ವಿನಿ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದ ಮೊದಲಿಗೆ ಶಾರದಾ ಪ.ಪೂ. ಕಾಲೇಜಿನ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಕೆ. ಹರೀಶ್ ಸರಳಾಯ ಅವರು ಸ್ವಾಗತಿಸಿ, ಕಾರ್ಯಕ್ರಮದ ಕೊನೆಗೆ ಗಣಿತಶಾಸ್ತ್ರ ಉಪನ್ಯಾಸಕರಾದ ಶ್ರೀ ಕೃಷ್ಣಪ್ರಸಾದ್ ರಾವ್ ವಂದಿಸಿದರು. ಶ್ರೀಮತಿ ಅನುಪಮಾ ಜಿ.ಕೆ. ಕಾರ್ಯಕ್ರಮವನ್ನು ನಿರ್ವಹಿಸಿದರು.

 

Recent News

Back To Top
error: Content is protected !!