ನವದೆಹಲಿ: ಇಂದಿನಿಂದ ಭಾರತ-ರಷ್ಯಾ ನಡುವಣ 19ನೇ ಶೃಂಗಸಭೆ ಆರಂಭಗೊಳ್ಳಲಿದ್ದು, ಉಭಯ ದೇಶಗಳ ನಡುವೆ ಮಹತ್ವದ ರಕ್ಷಣಾ ಒಪ್ಪಂದಕ್ಕೆ ಸಹಿ ಬೀಳುವ ನಿರೀಕ್ಷೆ ಇದೆ.
ಗುರುವಾರ ಸಂಜೆ ನವದೆಹಲಿಗೆ ಬಂದಿಳಿದಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಬಳಿಕ ಪುಟಿನ್ ಅವರನ್ನು ತಮ್ಮ ನಿವಾಸದಲ್ಲಿ ಸ್ವಾಗತಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಆತ್ಮೀಯ ಸ್ವಾಗತವನ್ನು ಕೋರಿದ್ದಾರೆ.
ಹೈದರಾಬಾದ್ ಹೌಸ್ನಲ್ಲಿ ಮೋದಿ ಮತ್ತು ಪುಟಿನ್ ನಡುವೆ ಮಹತ್ವದ ಮಾತುಕತೆ ನಡೆಯಲಿದ್ದು, 5 ಬಿಲಿಯನ್ ಡಾಲರ್ ಮೊತ್ತದ ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಡೀಲ್ಗೆ ಸಹಿ ಬೀಳುವ ನಿರೀಕ್ಷೆ ಇದೆ.
ಅಮೆರಿಕಾದ ಬೆಸರಿಕೆಯ ನಡುವೆಯೂ ಈ ಡೀಲ್ ಕುದುರಿಸಲು ಭಾರತ-ರಷ್ಯಾ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ಎಲ್ಲರ ಚಿತ್ತ ಇತ್ತ ನೆಟ್ಟಿದೆ.
source; Zeenews
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.