ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಅಕ್ಟೋಬರ್ 24ರಂದು ದೇಶದ ಸಾವಿರಾರು ಐಟಿ ವೃತ್ತಿಪರರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಕೇಂದ್ರ ಸಚಿವ ರವಿಶಂಕ ಪ್ರಸಾದ್ ತಿಳಿಸಿದ್ದಾರೆ.
ಟೌನ್ಹಾಲ್ ಕಾರ್ಯಕ್ರಮದಲ್ಲಿ ಮೋದಿ ಸಾವಿರಾರು ಐಟಿ ವೃತ್ತಿಪರರೊಂದಿಗೆ ಸಂವಾದ ನಡೆಸಲಿದ್ದಾರೆ, ದೇಶದ 12-13 ಸ್ಥಳಗಳ ಟೆಕ್ಕಿಗಳೊಂದಿಗೆ ಮಾತುಕತೆ ನಡೆಯಲಿದೆ, ಸಾಮಾಜಿಕ ಒಳಗೊಳ್ಳುವಿಕೆಯ ಡಿಜಿಟಲ್ ಸ್ಟೋರಿ ರಚನೆಗೆ ಮೋದಿ ಇವರನ್ನು ಪ್ರೇರೇಪಿಸಲಿದ್ದಾರೆ ಎಂದು ಪ್ರಸಾದ್ ಹೇಳಿದ್ದಾರೆ.
‘ಸಾಮಾಜಿಕ ಸಬಲೀಕರಣ, ಸಾಮಾಜಿಕ ಕಾರ್ಯದ ಗುರಿಯೊಂದಿಗೆ ಈ ಕಾರ್ಯಕ್ರಮವನ್ನು ಆಯೋಜನೆಗೊಳಿಸಲಾಗಿದ್ದು, ಸಹಕಾರ ಮತ್ತು ಸಹಾನುಭೂತಿಯೊಂದಿಗೆ ಸಮಾಜಕ್ಕಾಗಿ ದುಡಿಯಲು ಐಟಿ ವೃತ್ತಿಪರರಿಗೆ ಈ ಕಾರ್ಯಕ್ರಮ ಸ್ಫೂರ್ತಿಯಾಗಲಿದೆ’ ಎಂದಿದ್ದಾರೆ.
source; Timesnownews.com
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.